ಬೆಂಗಳೂರು: ‘ರಾಜ್ಯದ ಹಲವೆಡೆ ಕಾಂಗ್ರೆಸ್ ಭವನಗಳನ್ನು ನಿರ್ಮಿಸಲು ಕಾನೂನುಬಾಹಿರವಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇವೆ’ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್, ‘ರಾಜಕೀಯ ಪಕ್ಷಗಳಿಗೆ ಸಿಎ ನಿವೇಶನ ಗಳನ್ನು ನೀಡಬಾರದು ಎಂಬ ನಿಯಮವಿದೆ. ಹೀಗಿದ್ದೂ ಕಾಂಗ್ರೆಸ್ ತನಗೆ ತಾನೇ ನಿವೇಶನಗಳನ್ನು ಹಂಚಿಕೆ ಮಾಡಿಕೊಂಡಿದೆ’ ಎಂದರು.

‘ಅಧಿಕಾರಿಗಳ ವಿರೋಧವಿದ್ದರೂ ಮಾರ್ಗಸೂಚಿ ದರದ ಶೇ 5ರಷ್ಟು ಹಣ ಪಡೆದು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಕೇಳಿದ್ದ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾರಿಕೆ ಉತ್ತರ ನೀಡಿದ್ದರು. ಆದರೆ, ಸರ್ಕಾರದ ನಡೆಗೆ ಈಗ ಹೈಕೋರ್ಟ್ ಛೀಮಾರಿ ಹಾಕಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-624028768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.