ಬೆಂಗಳೂರು: ‘ಮುಸ್ಲಿಂ ಪ್ರಿಯಕರನ ಜೊತೆ ಬದುಕಲು ನಿಶ್ಚಯಿಸಿರುವ ನನ್ನ 21 ವರ್ಷದ ಪುತ್ರಿಯ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿದ್ದ ತಾಯಿಯೊಬ್ಬರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

‘ನಾಪತ್ತೆಯಾಗಿರುವ ಪುತ್ರಿಯನ್ನು ಪತ್ತೆ ಮಾಡಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಿಖ್ ಸಮುದಾಯದ ಯುವತಿಯ ತಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಸೂರಜ್ಗೋವಿಂದ ರಾಜ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ಯುವತಿ, ‘ನನ್ನಪೋಷಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೆಲವರು ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ನನ್ನ ಪ್ರಿಯತಮ ಅತ್ಯಾಚಾರ ಎಸಗಿ, ಮತಾಂತರಕ್ಕೆ ಒತ್ತಾಯಿಸಿದ್ದಾನೆ ಎಂದು ಪತ್ರ ಬರೆದಿದ್ದೆ’ ಎಂದರು.

‘ಪತ್ರದಲ್ಲಿ ಬರೆದಿರುವ ಮತಾಂತರ ಮತ್ತು ಅತ್ಯಾಚಾರ ಆರೋಪಗಳು ಸತ್ಯಅಲ್ಲ. ನನಗೆ ಬೆದರಿಕೆ ಹಾಕಿ, ಆ ಪತ್ರ ಬರೆಯುವಂತೆ ಮಾಡಲಾಗಿತ್ತು’ ಎಂದು ವಿವರಿಸಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಯುವತಿ ಸ್ವ ಇಚ್ಛೆಯಿಂದ ತನ್ನ ಪ್ರಿಯತಮನ ಜೊತೆ ವಾಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ವಯಸ್ಕ ಯುವತಿಯ ಒಪ್ಪಿಗೆಗೆ ವಿರುದ್ಧವಾಗಿ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲಾಗದು. ಅಂತೆಯೇ, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ’ ಎಂದು ಆದೇಶಿಸಿತು. ತಾಯಿಯ ಪರ ಹೈಕೋರ್ಟ್ ವಕೀಲ ಪಿ.ರಾಹುಲ್ ಕೃಷ್ಣಾರೆಡ್ಡಿ ವಾದ ಮಂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-617838191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.