ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಗಳು ಹಂಚಿಕೆ ಮಾಡುವ ನಿವೇಶನಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಕೋಟಾ ನಿಗದಿ ಮಾಡಲು ಹಾಗೂ ಹಂಚಿಕೆಯಾದ ನಿವೇಶನದ ಮೌಲ್ಯದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

‘ಕರ್ನಾಟಕ ರಾಜ್ಯ ವಿಕಲಚೇತನರ ಸಂಘಟನೆ’ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಗವಿಕಲರ ಹಕ್ಕುಗಳ ಕಾಯ್ದೆ–2016ರ ಸೆಕ್ಷನ್-37ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ಕಾಯಿದೆಯು ಅಂಗವಿಕಲರಿಗೆ ವಸತಿ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುತ್ತದೆ. ಹೈಕೋರ್ಟ್ ಸೂಚನೆ ಯಂತೆ ನಗರಾಭಿವೃದ್ಧಿ ಇಲಾಖೆಯು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಿವೇಶನಗಳ ಹಂಚಿಕೆ) ನಿಯಮ–1991'ಕ್ಕೆ ತಿದ್ದುಪಡಿ ತಂದು ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ಅಂಗವಿಕಲರ ಕೋಟಾದಲ್ಲಿ ನಿವೇಶನ ಹಂಚಿಕೆ ಮಾಡುವಾಗ ಅಂಗವಿಕಲ ಮಹಿಳೆಯರಿಗೂ ಸೂಕ್ತ ಆದ್ಯತೆ ನೀಡಬೇಕು ಎಂದು ಹೇಳಿದೆ. ಈ ಅಧಿಸೂಚನೆಯು ವಸತಿಗಷ್ಟೇ ಸೀಮಿತವಾಗದೆ, ಸ್ವಯಂ ಉದ್ಯೋಗ, ವ್ಯಾಪಾರ ಅಥವಾ ಉತ್ಪಾದನಾ ಕೇಂದ್ರಗಳ ಸ್ಥಾಪನೆ, ರಿಯಾಯಿತಿ ದರದಲ್ಲಿ ಭೂಮಿ ಪಡೆಯಲೂ ಸಹಕಾರಿಯಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1928122027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.