ಬೆಂಗಳೂರು: ಮೂರು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲಾ ವ್ಯವಸ್ಥೆ ರೂಪಿಸಲಾಗುವುದು ಎಂದು ಶಿಕ್ಷಣಕ್ಕೆ ಸಂಬಂಧಿಸಿದ ಎಂಟು ಗ್ಯಾರಂಟಿಗಳನ್ನು ಘೋಷಿಸಿರುವ ರಾಜ್ಯ ಸರ್ಕಾರಕ್ಕೆ ಎಐಡಿಎಸ್ಒ ರಾಜ್ಯ ಸಮಿತಿಯು ಎಂಟು ಪ್ರಶ್ನೆಗಳನ್ನು ಕೇಳಿದೆ.

ಪ್ರಾಥಮಿಕ ಶಾಲೆಗಳಲ್ಲಿ 5ನೇ ತರಗತಿವರೆಗೆ, ತರಗತಿಗೊಬ್ಬ ಶಿಕ್ಷಕ ಮತ್ತು 6ನೇ ತರಗತಿಯಿಂದ ವಿಷಯವಾರು ಶಿಕ್ಷಕರನ್ನು ಒದಗಿಸುವುದಾಗಿ ಸರ್ಕಾರ ಹೇಳಿದೆ. ಹಾಗಾದರೆ, ರಾಜ್ಯದ 19,536 ಕಿರಿಯ ಪ್ರಾಥಮಿಕ ಶಾಲೆಗಳಿಗೆ ಅಗತ್ಯವಿರುವ 97,680 ಹೊಸ ಶಿಕ್ಷಕರ ನೇಮಕಾತಿ ಯಾವಾಗ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ. ಶಾಲೆಗಳಲ್ಲಿ ಕನ್ನಡದ ಜೊತೆ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ, ಕನ್ನಡ ಮತ್ತು ಇಂಗ್ಲಿಷ್ಗೆ ಪ್ರತ್ಯೇಕ ತರಗತಿಗಳೆಲ್ಲಿವೆ? ಇಂಗ್ಲಿಷ್ ಮಾಧ್ಯಮದಲ್ಲಿ ನುರಿತ ಶಿಕ್ಷಕರೆಲ್ಲಿದ್ದಾರೆ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಕೆಪಿಎಸ್ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ: ವಾಸ್ತವದಲ್ಲಿ ಇಂದಿಗೂ ಸರ್ಕಾರಿ ಬಸ್ ಕಾಣದ ಅದೆಷ್ಟೋ ಹಳ್ಳಿಗಳಿವೆ. ಹೀಗಿರುವಾಗ ಈ ಸಾರಿಗೆ ಯಾವ ಶಾಲೆಗಳಿಗೆ ತಲುಪುತ್ತದೆ. ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಹಾಗೂ ಮೂರನೇ ತರಗತಿಯಿಂದ ಎಐ ಕಲಿಕೆಎಂದು ಹೇಳಲಾಗಿದೆ. ಅಕ್ಷರಾಭ್ಯಾಸ ಕಲಿಸುವ ಹೊತ್ತಲ್ಲಿಕಂಪ್ಯೂಟರ್ ಹೇರಿಕೆಯೇಕೆ? ಮಕ್ಕಳನ್ನು ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮದಿಂದ ದೂರವಿಡಬೇಕು ಎಂದು ಹೇಳುತ್ತಿರುವಾಗ, ಈ ದ್ವಂದ್ವ ಏಕೆ ಎಂದಿದ್ದಾರೆ. ಸಂಗೀತ, ಕಲೆ ಮತ್ತು ದೈಹಿಕ ಶಿಕ್ಷಣಕ್ಕೆ ಪ್ರತ್ಯೇಕ ಶಿಕ್ಷಕರ ನೇಮಕ ಮಾಡುವುದಾಗಿ ತಿಳಿಸಲಾಗಿದೆ. 4000ಕ್ಕೂ ಅಧಿಕ ವಿಶೇಷ ಶಿಕ್ಷಕರ ನೇಮಕಾತಿ ಯಾವಾಗ ಮಾಡುತ್ತೀರಿ?ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ವಿಶೇಷ ಶಿಕ್ಷಕರ ಹುದ್ದೆಯೇ ಇಲ್ಲ ಎಂದಿದ್ದಾರೆ.

ಈ ಗ್ಯಾರಂಟಿಗಳು, ಕೇವಲ ಕೆಪಿಎಸ್ ಶಾಲೆಗಳಲ್ಲಿ ಮಾತ್ರ ಅನುಷ್ಠಾನಗೊಳ್ಳಲಿವೆ. ಹಾಗಾದರೆ, ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದೇಶದಲ್ಲೇ ಅತ್ಯುತ್ತಮ ಮಾದರಿಯಾಗಿ ರೂಪಿಸುವುದಾಗಿ ಹೇಳುತ್ತಿರುವ ಸರ್ಕಾರ, ನಾಡಿನ ಜನರಿಗೆ ವಿಶ್ವಾಸ ದ್ರೋಹ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.