ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ನಲ್ಲಿ ರೋಲ್ಸ್–ರಾಯ್ಸ್ ಕಂಪನಿಯು ಸ್ಥಾಪಿಸಿರುವ ಅತ್ಯಾಧುನಿಕ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯ ಕೇಂದ್ರವನ್ನು (ಜಿಸಿಸಿ) ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ರಾಜ್ಯದ ವೈಮಾಂತರಿಕ್ಷ ಉದ್ಯಮ ವಲಯದ ಕಾರ್ಯ ಪರಿಸರವನ್ನು ಸೃಷ್ಟಿಸುವಲ್ಲಿ ರೋಲ್ಸ್ ರಾಯ್ಸ್ ಕಂಪನಿಯು ಮೊದಲಿನಿಂದಲೂ ನಮ್ಮ ಜತೆಗಿದೆ’ ಎಂದರು.

ನೂತನ ಜಿಸಿಸಿ ಕೇಂದ್ರವು ಕಂಪನಿಯ ಪಾಲಿಗೆ ಅತ್ಯಂತ ದೊಡ್ಡ ಮತ್ತು ಅತ್ಯಾಧುನಿಕ ಕೇಂದ್ರ. ಇಂತಹ ಉಪಕ್ರಮಗಳಿಂದಾಗಿ ಬೆಂಗಳೂರು ನಗರ ವೈಮಾಂತರಿಕ್ಷ ವಲಯದ ಹೂಡಿಕೆಯಲ್ಲಿ ಜಗತ್ತಿನ ಮೊದಲ ಮೂರು ನಗರಗಳಲ್ಲಿ ಒಂದಾಗಿ ಬೆಳೆದಿದೆ. ಜಿಸಿಸಿ ಕೇಂದ್ರದಲ್ಲಿ 700 ಮಂದಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ರೋಲ್ಸ್ ರಾಯ್ಸ್ ಕಂಪನಿಯು ಭಾರತದಲ್ಲಿ 2,000 ಹೆಚ್ಚು ಎಂಜಿನಿಯರುಗಳನ್ನು ಹೊಂದಿದೆ. ಈ ಪೈಕಿ ಹೆಚ್ಚಿನವರು ಕರ್ನಾಟಕದಿಂದಲೇ ಕೆಲಸ ಮಾಡುತ್ತಿದ್ದಾರೆ. ಈ ಕಂಪನಿಯ ಜತೆಗೆ ಏಕಸ್, ಕಾಲಿನ್ಸ್ ಏರೋಸ್ಪೇಸ್, ವಿಪ್ರೊ, ಮಹೀಂದ್ರ, ಬೋಯಿಂಗ್, ಏರ್ಬಸ್ ಮತ್ತು ಫಿಕ್ಸೆಲ್ ಕಂಪನಿಗಳೂ ರಾಜ್ಯದಲ್ಲಿ ನೆಲೆಯೂರಿವೆ. ಇವು ಕ್ರಮವಾಗಿ ಪವರ್ ಸಿಸ್ಟಂ ಮತ್ತು ಪ್ರೊಪಲ್ಶನ್, ಸ್ಟ್ರಕ್ಚರಲ್ ಮತ್ತು ಮೆಕ್ಯಾನಿಕಲ್ ಬಿಡಿಭಾಗಗಳು, ವಿಶೇಷ ಪರಿಣತಿಯ ತಂತ್ರಜ್ಞಾನಗಳಲ್ಲಿ ಸಾಧನೆ ಮಾಡಿವೆ ಎಂದು ಹೇಳಿದರು.

‘ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯು ಆಕರ್ಷಕವಾಗಿದ್ದು, ಹೂಡಿಕೆದಾರರಿಗೆ ಒಳ್ಳೆಯ ಪ್ರೋತ್ಸಾಹನಾ ಭತ್ಯೆಗಳನ್ನು ಒಳಗೊಂಡಿದೆ. ಇದರ ಜತೆಗೆ ನಮ್ಮಲಿರುವ ಸಂಶೋಧನಾ ಸಂಸ್ಕೃತಿಯು ಇದಕ್ಕೆ ಪೂರಕವಾಗಿ, ಬಲ ತುಂಬುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ರೋಲ್ಸ್ ರಾಯ್ಸ್ ಸಿಎಫ್ಒ ಹೆಲೆನ್ ಮ್ಯಾಕಬೆ, ಬ್ರಿಟಿಷ್ ಹೈಕಮಿಷನರ್ ಲಿಂಡಿ ಕೆಮರಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.