ಬೆಂಗಳೂರು: ‘ಸರ್ಕಾರಿ ಸಾಮಾಜಿಕ ಜಾಲತಾಣವನ್ನು ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವುದಕ್ಕೆ ಅಥವಾ ಸಾಂವಿಧಾನಿಕ ಸಂಸ್ಥೆಗಳನ್ನು ಟೀಕಿಸುವುದಕ್ಕೆ ಬಳಸುವುದು ಅಕ್ಷಮ್ಯ ಅಪರಾಧ. ಇದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆ’ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಕುರಿತು ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

‘ಮುಖ್ಯಮಂತ್ರಿ ಕಚೇರಿ ಎನ್ನುವುದು ಕೇವಲ ಒಬ್ಬ ವ್ಯಕ್ತಿ ಅಥವಾ ರಾಜಕೀಯ ಪಕ್ಷದ ಸ್ವತ್ತಲ್ಲ. ಅದು ರಾಜ್ಯದ ಏಳು ಕೋಟಿ ಜನರ ಆಶೋತ್ತರಗಳು ಮತ್ತು ಆಡಳಿತದ ಪಾರದರ್ಶಕತೆ ಯನ್ನು ಪ್ರತಿನಿಧಿಸುವ ಉನ್ನತ ಸಾಂವಿಧಾನಿಕ ಸ್ಥಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಕಚೇರಿಯನ್ನು ರಾಜಕೀಯ ಲಾಭಕ್ಕೆ ಮತ್ತು ವಿರೋಧ ಪಕ್ಷಗಳ ತೇಜೋವಧೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬಗೆಯುತ್ತಿರುವ ದ್ರೋಹ’ ಎಂದು ಟೀಕಿಸಿದ್ದಾರೆ.

‘ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಆದರೆ ಮುಖ್ಯಮಂತ್ರಿ ಯವರ ಅಧಿಕೃತ ಖಾತೆಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಿಷ ಕಾರುವುದು ಮತ್ತು ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ದೂರಿದ್ದಾರೆ.

‘ಸರ್ಕಾರದ ಅಧಿಕೃತ ಪ್ರಕಟಣೆಗಳು, ಜನಹಿತ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಬೇಕಾದ ವೇದಿಕೆಗಳು ಇಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.