ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನದ ಲೈವ್ ವೆಬ್‍ಕಾಸ್ಟಿಂಗ್: ಬಿಜೆಪಿ ಮನವಿ

Published 28 ಮೇ 2024, 15:52 IST
Last Updated 28 ಮೇ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ ಜೂ.3 ರಂದು ನಡೆಯಲಿದ್ದು, ಕನಕಪುರ, ಹೊಸಕೋಟೆ, ಆನೇಕಲ್‌, ದೇವನಹಳ್ಳಿ, ಬಿ.ಟಿ.ಎಂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್‌ವೆಬ್‌ಕಾಸ್ಟಿಂಗ್‌ ಮಾಡುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಮನವಿಯಲ್ಲಿ ತಿಳಿಸಿರುವ ವಿಧಾನಸಭಾ ಕ್ಷೇತ್ರಗಳು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಒಳಗೊಂಡಿವೆ. ಮತದಾನ ಸುಗಮ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ ಈ ಕ್ಷೇತ್ರಗಳಲ್ಲಿ ವೆಬ್‌ಕಾಸ್ಟಿಂಗ್‌ ನಡೆಸಬೇಕು ಎಂದು ಒತ್ತಾಯಿಸಿದೆ.

ಬಿಜೆಪಿ ನಿಯೋಗದಲ್ಲಿ ಪಕ್ಷದ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್‌, ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ಪ್ರಕೋಷ್ಠದ ಸದಸ್ಯ ಯಶವಂತ್‌, ವೀಣಾ ಅರುಣ್‌, ಕೆ.ಪಿ.ವಿಶ್ವನಾಥ್‌, ಬೆಂಗಳೂರು ಉತ್ತರ ಜಿಲ್ಲಾ ಸಂಚಾಲಕ ಶಿವಾನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT