ಬೆಂಗಳೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅವರ ಜಾಗಕ್ಕೆ ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ, ಸಾಮಾಜಿಕ ಭದ್ರತೆ) ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ, ಸಾಮಾಜಿಕ ಭದ್ರತೆ) ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ಕುಮಾರ್ ಮೀನಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮನೋಜ್ಕುಮಾರ್ ಮೀನಾ ಅವರು ನಿಭಾಯಿಸುತ್ತಿದ್ದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹೊಣೆಯನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪ ನಿರ್ದೇಶಕ ಕ್ಯಾಪ್ಟನ್ ಕೆ. ರಾಜೇಂದ್ರ ಅವರನ್ನು ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಹರ್ಷ ಗುಪ್ತ ವಿರುದ್ಧ ಆಕ್ರೋಶ: ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿಯ ವರ್ಗಾವಣೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಹರ್ಷ ಗುಪ್ತ ಕೈಗೊಂಡಿದ್ದರು. ಆದರೆ, ಅವರ ಕೆಲವು ಕ್ರಮಗಳಿಗೆ ಇಲಾಖೆಯ ಒಳಗೆಯೇ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ರಾಜ್ಯದಾದ್ಯಂತ ಔಷಧ ಕೊರತೆ ಸೇರಿದಂತೆ ಇಲಾಖೆಯಲ್ಲಿನ ಸಮಸ್ಯೆಗಳನ್ನು ಇತ್ತೀಚೆಗೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಪಕ್ಷಾತೀತವಾಗಿ ಪ್ರಸ್ತಾಪಿಸಿದ್ದ ಶಾಸಕರು, ಹರ್ಷ ಗುಪ್ತ ಅವರ ಕಾರ್ಯವೈಖರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.