ಬೆಂಗಳೂರು: ವಿಶೇಷ ರಿಯಾಯಿತಿ ಮತ್ತು ಉತ್ತೇಜನ ಸವಲತ್ತುಗಳನ್ನು ಪಡೆದುಕೊಂಡು ಹೂಡಿಕೆ ಮಾಡುವ ಕಂಪನಿಗಳು, ಸ್ಥಳೀಯರಿಗೇ ಹೆಚ್ಚಿನ ಉದ್ಯೋಗಗಳನ್ನು ನೀಡಬೇಕು ಎಂಬುದರ ಬಗ್ಗೆ ಹೂಡಿಕೆ ಉತ್ತೇಜನ ಮತ್ತು ರಿಯಾಯಿತಿ ಮಂಜೂರು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ.

ವಿಧಾಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ 13 ವಿವಿಧ ಕಂಪನಿಗಳು ಕೇಳಿರುವ ರಿಯಾಯಿತಿ ಮತ್ತು ವಿನಾಯಿತಿ ಪ್ರಸ್ತಾವಗಳ ಬಗ್ಗೆ ಚರ್ಚೆಯಾಗಿದೆ. ಈ ಕಂಪನಿಗಳು ತೆರಿಗೆ, ಭೂಮಿ, ಮತ್ತಿತರ ಶುಲ್ಕಗಳಲ್ಲಿ ಶೇ 40ರವರೆಗೂ ರಿಯಾಯಿತಿ ಕೇಳಿವೆ. ಅದನ್ನು ಶೇ 25– ಶೇ 30ರಷ್ಟಕ್ಕೆ ತರಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಕಂಪನಿಗಳು ಹೆಚ್ಚಿನ ಪ್ರಮಾಣದ ವಿನಾಯಿತಿ ಕೇಳಿದ್ದರೂ, ಹೂಡಿಕೆಯಿಂದ ರಾಜ್ಯಕ್ಕಾಗುವ ಲಾಭವನ್ನು ಪರಿಗಣಿಸಿ ಅವುಗಳ ಪ್ರಸ್ತಾವಗಳನ್ನು ಕಾಯ್ದಿರಿಸಲಾಗಿದೆ. ಆದರೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒತ್ತಿ ಹೇಳಿದರು ಎಂದು ತಿಳಿಸಿವೆ.

ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ, ಎನ್.ಎಸ್.ಬೋಸರಾಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-245866029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.