ಬೆಂಗಳೂರು: ‘ಪಕ್ಷಕ್ಕೆ ಲೆಟರ್ಹೆಡ್, ವಿಸಿಟಿಂಗ್ ಕಾರ್ಡ್ ಜಿಲ್ಲಾ ಘಟಕದ ಅಧ್ಯಕ್ಷರ ಅವಶ್ಯಕತೆ ಇಲ್ಲ. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವವರಿಗಷ್ಟೇ ಆ ಹುದ್ದೆಗಳನ್ನು ನೀಡುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಕ್ಷದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಸಭೆಯಲ್ಲಿ ಅವರು ಕೆಲ ಪದಾಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ಹೇಳಿವೆ.

‘ಕೆಲವು ಜಿಲ್ಲೆಗಳಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದರೂ, ಮುಖಂಡರ ವರ್ತನೆಯ ಕಾರಣಕ್ಕೆ ಪಕ್ಷಕ್ಕೆ ಹಿನ್ನಡೆಆಗುತ್ತಿದೆ. ಈ ಬಗ್ಗೆ ಹಲವು ದೂರುಗಳು ಬಂದಿವೆ. ಪಕ್ಷದ ಪ್ರಮುಖರ ಸಮಿತಿಯ ಸಭೆಗೆ ಕೆಲವು ಜಿಲ್ಲಾ ಘಟಕದ ಅಧ್ಯಕ್ಷರು ಹಾಜರಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯಾರೇ ಆಗಿದ್ದರೂ ಎರಡು–ಮೂರು ಸಭೆಗಳಿಗೆ ಗೈರು ಹಾಜರಾದರೆ, ಅವರನ್ನು ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ’ ಎಂದಿವೆ.

‘ರಾಜ್ಯ ರಾಜಕಾರಣದಲ್ಲಿ ಮುಂದಿನ ಎರಡು ವರ್ಷ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಪಕ್ಷದ ಹುದ್ದೆಯ ಹೆಸರಿನಲ್ಲಿ ಶೋಕಿ ಮಾಡುವವರಿಂದ ಈ ಕೆಲಸ ಸಾಧ್ಯವಿಲ್ಲ. ಅಂತಹವರು ಪಕ್ಷಕ್ಕೆ ಬೇಕಾಗಿಯೂ ಇಲ್ಲ. ಸಕ್ರಿಯವಾಗಿ ಮತ್ತು ನಿಷ್ಠೆಯಿಂದ ಪಕ್ಷ ಸಂಘಟನೆ ಮಾಡುವವರಷ್ಟೇ ಪಕ್ಷದಲ್ಲಿ ಉಳಿಯುತ್ತಾರೆ ಎಂದೂ ಎಚ್ಚರಿಸಿದರು’ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-4-2082709775

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.