ಬೆಂಗಳೂರು: ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಸಿಬ್ಬಂದಿಯನ್ನು ಕೆಲಸದಿಂದ ತೆಗೆಯದಂತೆ, 2025ರ ಅಕ್ಟೋಬರ್ನಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಪಾವತಿಸಲು ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಮನವಿ ಮಾಡಿದೆ.

ಈ ಬಗ್ಗೆ, ಸಮಿತಿಯ ಪರವಾಗಿ ಎಲ್. ಹನುಮಂತಯ್ಯ, ಕೆ. ಮರುಳಸಿದ್ಧಪ್ಪ, ಎಸ್.ಜಿ. ಸಿದ್ಧರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಎಂ. ಪ್ರಕಾಶಮೂರ್ತಿ, ಆರ್.ಜಿ. ಹಳ್ಳಿ ನಾಗರಾಜ್, ಎಸ್.ಆರ್. ನಂಜುಂಡೇಗೌಡ ಪತ್ರ ಬರೆದಿದ್ದಾರೆ.

‘ಕಸಾಪ ಅಧ್ಯಕ್ಷರಾಗಿದ್ದ ಮಹೇಶ ಜೋಶಿ ಅವರ ಅವಧಿಯಲ್ಲಿ ಸರ್ವಾಧಿಕಾರಿ ಧೋರಣೆ, ಏಕಚಕ್ರಾಧಿಪತ್ಯ, ಕಾನೂನು ಬಾಹಿರ ನಿಬಂಧನೆಗಳ ತಿದ್ದುಪಡಿ, ಅವ್ಯವಹಾರ ಸೇರಿ ವಿವಿಧ ಆರೋಪಗಳ ತನಿಖೆಗೆ ವಿಚಾರಣಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. 17 ವಿಚಾರಣಾಂಶಗಳಲ್ಲಿ, ನಿಯಮ ಬಾಹಿರ ಸಿಬ್ಬಂದಿ ನೇಮಕಾತಿಯೂ ಸೇರಿತ್ತು. ಈ ಬಗ್ಗೆ ವಿಚಾರಣಾಧಿಕಾರಿ ವರದಿ ಸಲ್ಲಿಸಿದ್ದಾರೆ. ಹೀಗಾಗಿ, ಹಿಂದಿನ ಆಡಳಿತಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದರು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘22 ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಅನುಸಾರ ನೇಮಕಗೊಂಡಿಲ್ಲದ ಕಾರಣ, ಅವರನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಆರ್ಥಿಕ ಇಲಾಖೆ ಸೂಚಿಸಿದೆ. ಆದರೆ, ವಿಚಾರಣಾಂಶವು ಹಿಂದಿನ ಅಧ್ಯಕ್ಷರಿಗೆ ಮಾತ್ರ ಸೀಮಿತವಾಗಿದೆ. 22 ಸಿಬ್ಬಂದಿಯಲ್ಲಿ ಕೆಲವರು 13 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸದೆ, ಸಂಚಿತ ವೇತನದಡಿಯೇ ಮುಂದುವರಿಸಬೇಕು. 2025ರ ಅಕ್ಟೋಬರ್ ತಿಂಗಳಿಂದ ಬಾಕಿ ಇರಿಸಿಕೊಂಡಿರುವ ವೇತನ ಪಾವತಿಗೆ ಆರ್ಥಿಕ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-4-798301743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.