‘ವಿಶ್ವಾಸ ಇಮ್ಮಡಿಯಾಗಿದೆ’ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪಿಗಳ ದುಷ್ಕೃತ್ಯ ಸಾರ್ವಜನಿಕರ ವಿಶ್ವಾಸ ಮತ್ತು ಭದ್ರತೆಯ ಪ್ರಜ್ಞೆಯನ್ನೇ ಅಲುಗಾಡಿಸಿತ್ತು. ಪೊಲೀಸರ ದಕ್ಷತೆಯ ಬಗ್ಗೆ ಸಾರ್ವಜನಿಕರ ವಿಶ್ವಾಸ ಕುಸಿಯುವಂತೆ ಮಾಡಿತ್ತು. ಆದರೆ ಈ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗಳಿಗೆ ಸೂಕ್ತ ಶಿಕ್ಷೆ ವಿಧಿಸುವ ಮೂಲಕ ನ್ಯಾಯದ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಅಂತೆಯೇ ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯನ್ನು ಕಾನೂನುಬಾಹಿರ ಎಂದು ಘೋಷಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಈ ತೀರ್ಪು ಸಮರ್ಥಿಸಿದೆ
ಪಿ.ಪ್ರಸನ್ನ ಕುಮಾರ್ ಎನ್‌ಐಎ ಪರ ವಾದ ಮಂಡಿಸಿದ್ದ ವಿಶೇಷ ಪ್ರಾಸಿಕ್ಯೂಟರ್