ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) 1998ರಿಂದ 2024ರ ಅವಧಿಯಲ್ಲಿ ಸಿ, ಬಿ ಮತ್ತು ಎ ಗ್ರೂಪ್ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರ, ಪರೀಕ್ಷಾ ಅವ್ಯವಹಾರಗಳ ಬಗ್ಗೆ ಉನ್ನತಮಟ್ಟದ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ(ಆಕ್ಸಾ) ಆಗ್ರಹಿಸಿದೆ.

ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಮತ್ತು ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಬಡ ಪ್ರತಿಭಾವಂತ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದೆ. ಈ ಸಂಬಂಧ ಮನವಿಯನ್ನು ರಾಷ್ಟ್ರಪತಿ, ರಾಜ್ಯಪಾಲ, ಸಿಬಿಐ ನಿರ್ದೇಶಕ, ಲೋಕಾಯುಕ್ತ ನ್ಯಾಯ ಮೂರ್ತಿ, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದೆ.

ಕೆಪಿಎಸ್ಸಿಯ ಯಾವುದೇ ನೇಮಕಾತಿ ಯಲ್ಲಿ ಪಿ.ಸಿ.ಹೋಟಾ ಸಮಿತಿಯ ಶಿಫಾರಸು ಪಾಲಿಸದ ಕಾರಣ ಎಲ್ಲಾ ನೇಮಕಾತಿಗಳನ್ನು ಅಮಾನತ್ತಿನಲ್ಲಿ ಇರಿಸಬೇಕು. ಪರೀಕ್ಷಾ ಅಕ್ರಮದಲ್ಲಿ ಭಾಗಿ ಯಾಗಿರುವ ಸಿಬ್ಬಂದಿ, ಅಧಿಕಾರಿಗಳು, ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದೆ.

ಆಯ್ಕೆ ಪಟ್ಟಿ ರದ್ದುಪಡಿಸದಿದ್ದರೆ ಕೆಪಿಎಸ್ಸಿಗೆ ಮುತ್ತಿಗೆ ಹಾಕುವ ಚಳವಳಿ ನಡೆಸಲಾಗುವುದು ಎಂದು ನಿರುದ್ಯೋಗಿ ಅಭ್ಯರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-4-1723948341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.