ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಇತರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಮತ ಪತ್ರಗಳನ್ನು ಬಳಸುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸದಿರಲು ಸರ್ಕಾರ ತೀರ್ಮಾನಿಸಿದೆ.

ಕಾನೂನಿಗೆ ತಿದ್ದುಪಡಿ ಮಾಡಿದ ಬಳಿಕ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿಲ್ಲ.

‘ಕಾನೂನಿಗೆ ತಿದ್ದುಪಡಿ ಮಾಡಬೇಕು. ಆದರೆ, ಸುಗ್ರೀವಾಜ್ಞೆ ಹೊರಡಿಸುವುದು ಬೇಡ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಅಥವಾ ಮತಪತ್ರ ಎರಡರಲ್ಲಿ ಯಾವುದಾದರೂ ಒಂದನ್ನು ಬಳಸಬಹುದು ಎಂಬ ಅಂಶ ಸುಪ್ರೀಂಕೋರ್ಟ್ನ ಒಂದು ತೀರ್ಪಿನಲ್ಲಿದೆ. ಹೀಗಾಗಿ ಸುಗ್ರೀವಾಜ್ಞೆಯ ಅವಶ್ಯ ಬೀಳದು ಎಂಬ ಚರ್ಚೆ ನಡೆದಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.