ಬೆಂಗಳೂರು: ಬಿಜೆಪಿ ಸದಸ್ಯರ ತೀವ್ರ ವಿರೋಧ, ಸಭಾತ್ಯಾಗದ ನಡುವೆಯೇ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲು ಮತಪತ್ರ (ಬ್ಯಾಲೆಟ್ ಪೇಪರ್) ಬಳಸಲು ಅವಕಾಶ ಕಲ್ಪಿಸುವ ಮಸೂದೆಗೆ ಸರ್ಕಾರ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ಪಡೆಯಿತು.

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪರ್ಯಾಲೋಚನೆಗೆ ಮಂಡಿಸಿದರು.

‘ಇವಿಎಂಗಳ ಮೇಲೆ ಜನರ ವಿಶ್ವಾಸ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆಗಳಲ್ಲೂ ಮತದಾನದ ಪ್ರಮಾಣದಲ್ಲಿ ದಿಢೀರ್ ಏರಿಕೆಯಾದ ಉದಾಹರಣೆಗಳಿವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದಿಂದ ಯಾವುದೇ ಸೂಕ್ತ ಸ್ಪಷ್ಟನೆ ಸಿಗದ ಕಾರಣ, ಚುನಾವಣೆಯಲ್ಲಿ ಪಾರದರ್ಶಕತೆ ತರಲು ಮತಪತ್ರ ಮತ್ತು ಮತಪೆಟ್ಟಿಗೆ ವ್ಯವಸ್ಥೆ ಜಾರಿಗೆ ತೀರ್ಮಾನಿಸಲಾಗಿದೆ’ ಎಂದರು.

‘ಮತಪತ್ರ ಕಳುವಾದರೆ ಯಾರು ಕದ್ದಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಆದರೆ, ಇವಿಎಂನಲ್ಲಿ ಅದು ಅಸಾಧ್ಯ. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಇದು ಅನಿವಾರ್ಯ’ ಎಂದೂ ಸಮರ್ಥಿಸಿದರು.

ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಕಾಂಗ್ರೆಸ್ ನಾಯಕರು ತಮ್ಮ ಸೋಲಿಗೆ ನೈಜ ಕಾರಣ ಹುಡುಕುತ್ತಿಲ್ಲ. ಬೀಗ ಕಳೆದುಕೊಂಡ ಜಾಗದಲ್ಲಿ ಹುಡುಕದೆ ಬೇರೆಡೆ ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮಸೂದೆ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

ಬಿಜೆಪಿಯ ವಿ. ಸುನಿಲ್ ಕುಮಾರ್, 'ಮತ್ತೆ ಹಳೆ ವ್ಯವಸ್ಥೆಗೆ ಮರಳುವುದರ ಹಿಂದೆ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುವ ಬಹುದೊಡ್ಡ ಹುನ್ನಾರ ಅಡಗಿದೆ’ ಎಂದು ಕಿಡಿಕಾರಿದರು.

ಬಿಜೆಪಿಯ ಎಸ್. ಸುರೇಶ್ ಕುಮಾರ್, 'ಇದು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರಕ್ಕೆ ಅನುಕೂಲವಾಗುವಂತೆ ತಂದಿರುವ ಮಸೂದೆ. ಸಿಲಿಕಾನ್ ಸಿಟಿಗೆ ಬಗೆಯುತ್ತಿರುವ ದ್ರೋಹ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ, ‘ಹಿಂದೆ ಸಭಾಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಚುನಾವಣಾ ಆಯೋಗಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಎಥಿಕಲ್ ಹ್ಯಾಕಿಂಗ್ ಕುರಿತು ಚುನಾವಣಾ ಆಯೋಗಕ್ಕೂ ಮನವಿ ಮಾಡಲಾಗಿತ್ತು’ ಎಂದರು.

ಕಾಂಗ್ರೆಸ್ನ ರಿಜ್ವಾನ್ ಅರ್ಷದ್, 'ಚುನಾವಣಾ ಆಯೋಗವು ಬಿಜೆಪಿ ಹೇಳಿದಂತೆ ಕೇಳುತ್ತಿದೆ. ಹೀಗಾಗಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಪತ್ರ ಪ್ರಯೋಗ ಆಗಲಿ ಬಿಡಿ’ ಎಂದರು.

ಇದೇ ವೇಳೆ ಆಳಂದ ಕ್ಷೇತ್ರದಲ್ಲಿನ ಮತ ಕಳವು ವಿಚಾರ ಪ್ರಸ್ತಾಪವಾಗಿ ವಾಕ್ಸಮರಕ್ಕೆ ಕಾರಣವಾಯಿತು. ‘ಆಳಂದದಲ್ಲಿ ಕಳ್ಳ ಮತದಾನ ಈಗಾಗಲೇ ಸಾಬೀತಾಗಿದೆ’ ಎಂದು ಪ್ರಿಯಾಂಕ್ ಹೇಳಿದಾಗ, ಮಧ್ಯಪ್ರವೇಶಿಸಿದ ಬಿಜೆಪಿಯ ಡಾ. ಸಿ.ಎನ್. ಅಶ್ವತ್ಥನಾರಾಯಣ, ‘ಆ ತನಿಖಾ ವರದಿಯನ್ನು ಮೊದಲು ಸದನದಲ್ಲಿ ಮಂಡಿಸಿ. ಆಗ ನೀವೇ ಸಿಕ್ಕಿಹಾಕಿಕೊಳ್ಳುತ್ತೀರಿ’ ಎಂದು ಸವಾಲು ಹಾಕಿದರು. ಅದಕ್ಕೆ ತಿರುಗೇಟು ನೀಡಿದ ಪ್ರಿಯಾಂಕ್, ‘ಈ ಪ್ರಕರಣದಲ್ಲಿ 22 ಸಾವಿರ ಪುಟಗಳ ದೋಷಾರೋಪ ಸಲ್ಲಿಕೆಯಾಗಿದೆ. ಅದರಲ್ಲಿ ಎ 1 ಹಾಗೂ ಎ 2 ಆರೋಪಿಗಳಾಗಿ ಬಿಜೆಪಿ ಅಭ್ಯರ್ಥಿಗಳು ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೇ ಇದ್ದಾರೆ’ ಎಂದರು.

ಬಿಜೆಪಿ ನಾಯಕರ ಆಕ್ಷೇಪಗಳಿಗೆ ಉತ್ತರ ನೀಡಿದ ಪ್ರಿಯಾಂಕ್, ‘ಪಾರದರ್ಶಕ ಚುನಾವಣೆಗೆ ನಡೆಸಲು ಮತಪತ್ರ ವ್ಯವಸ್ಥೆ ಅನಿವಾರ್ಯ’ ಎಂದು ಪ್ರತಿಪಾದಿಸಿದರು. ಆಗ, ಆರ್. ಅಶೋಕ, ಆಡಳಿತ ಪಕ್ಷದ ಸದಸ್ಯರ ಕಡೆಗೆ ಕೈ ತೋರಿಸಿ, ‘ಇವಿಎಂ ಸರಿಯಿಲ್ಲ ಎಂದು ಹೇಳುವ ಇವರು ಯಾರಿಗೂ ಇಲ್ಲಿ ಕುಳಿತುಕೊಳ್ಳಲು ಯೋಗ್ಯತೆ ಇಲ್ಲ. ಇದೊಂದು ನಾಚಿಕೆ ಕೆಟ್ಟ ಸರ್ಕಾರ’ ಎಂದು ಮಸೂದೆಯ ಪ್ರತಿಯನ್ನು ಹರಿದು ಬಿಸಾಡಿ ಸದನದಿಂದ ಹೊರನಡೆದರು. ಅವರ ಜೊತೆ ಬಿಜೆಪಿ, ಜೆಡಿಎಸ್ ಸದಸ್ಯರೂ ಸಭಾತ್ಯಾಗ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-44-1850661269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.