ಬೆಂಗಳೂರು: ಪ್ರಕರಣವೊಂದರಲ್ಲಿ ಜಾಮೀನಿಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ದೂರುದಾರರಿಂದ ₹5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಮಹಿಳಾ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬಂಧಿಸಿದ್ದಾರೆ.

ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್(ಸಿಸಿಎಚ್ 54) ಕೋರ್ಟ್ನ ಮಹಿಳಾ ಸರ್ಕಾರಿ ಅಭಿಯೋಜಕಿ ಸವಿತಾ ನವೀನ್ ಪಾಟೀಲ್ (55) ಬಂಧಿತರು. ಬನಶಂಕರಿ ನಿವಾಸಿ ಮಂಜುನಾಥ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಎಸ್.ಪಿ. ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹಣದ ಸಮೇತ ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಯುವತಿ ಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ದೂರುದಾರರ ಪರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಟೈಪಿಂಗ್ ಸೇರಿದಂತೆ ಇತರೆ ಖರ್ಚಿಗಾಗಿ ₹5 ಸಾವಿರ ನೀಡುವಂತೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಂತ್ರಸ್ತೆ ಪರವಾಗಿ ಮಂಜುನಾಥ್ ಎಂಬುವರು ದೂರು ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-354671495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.