ಬೆಂಗಳೂರು: ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪದಡಿ ಜೈಸಿಂಗ್ ರಜಪೂತ್ ಎಂಬಾತನನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ನಗರದಲ್ಲಿ ಬಂಧಿಸಿ ವಿಚಾರಣೆಗಾಗಿ ಮುಂಬೈಗೆ ಕರೆದೊಯ್ದಿದ್ದಾರೆ.

‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಗನಾಗಿರುವ ಆದಿತ್ಯ ಅವರಿಗೆ ಆರೋಪಿಯು ಇದೇ 8ರಂದು ದೂರವಾಣಿ ಕರೆ ಮಾಡಿದ್ದ. ಅದನ್ನು ಅವರು ಸ್ವೀಕರಿಸಿರಲಿಲ್ಲ. ಇದರಿಂದ ಕೆರಳಿದ್ದ ಆತ ಅವರ ಮೊಬೈಲ್‌ಗೆ ಬೆದರಿಕೆ ಸಂದೇಶಗಳನ್ನು ರವಾನಿಸಿದ್ದ. ಮೊಬೈಲ್ ನೆಟ್‌ವರ್ಕ್ ಪರಿಶೀಲಿಸಿದಾಗ ಆರೋಪಿಯು ಬೆಂಗಳೂರಿನಲ್ಲಿ ನೆಲೆಸಿರುವುದು ಗೊತ್ತಾಗಿತ್ತು. ಹೀಗಾಗಿ ಮುಂಬೈ ಪೊಲೀಸರ ತಂಡವೊಂದು ನಗರಕ್ಕೆ ಬಂದು ಆತನನ್ನು ಬಂಧಿಸಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಆರೋಪಿಯು ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಭಿಮಾನಿ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ’ ಎಂದೂ ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.