ಬೆಂಗಳೂರು: ಅತ್ತಿಗುಪ್ಪೆ ನಿಲ್ದಾಣದಲ್ಲಿ ಮೆಟ್ರೊ ರೈಲು ಚಲಿಸುತ್ತಿದ್ದ ಸಂದರ್ಭದಲ್ಲಿ ಹಳಿಗೆ ಬಿದ್ದು ಧ್ರುವ್ ಠಕ್ಕರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಾರಾಷ್ಟ್ರದ ಧ್ರುವ್, ಸರ್ಕಾರಿ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮೊದಲ ವರ್ಷದಲ್ಲಿ ಓದುತ್ತಿದ್ದರು. ಗುರುವಾರ ನಿಲ್ದಾಣಕ್ಕೆ ಬಂದಿದ್ದ ಇವರು, ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು. ರೈಲು ಬರುತ್ತಿದ್ದಂತೆ ಅದರ ಎದುರು ಹಳಿ ಮೇಲೆ ಜಿಗಿದಿದ್ದರು’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.