ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಭಾಗವಹಿಸುವ ವಿವಿಧ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಬೆಂಗಳೂರಿನ ಶಾಸಕ ಆರ್. ಅಶೋಕ ಅವರ ಹೆಸರಿಲ್ಲ.

ಬೆಳಿಗ್ಗೆ 10ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರು ಬೆಳಿಗ್ಗೆ 11ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಳಗಾವಿ–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ಮಧ್ಯಾಹ್ನ 1ಕ್ಕೆ ಸಮಾರಂಭ ನಡೆಯಲಿದೆ. ‘ನಮ್ಮ ಮೆಟ್ರೊ’ 3ನೇ ಹಂತಕ್ಕೆ (ಕಿತ್ತಳೆ ಮಾರ್ಗ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಳದಿ ಮಾರ್ಗದಲ್ಲಿ ಮೆಟ್ರೊ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಈ ಯಾವ ಕಾರ್ಯಕ್ರಮಗಳ ಪಟ್ಟಿಯಲ್ಲೂ ಅಶೋಕ ಅವರ ಹೆಸರಿನ ಉಲ್ಲೇಖವಿಲ್ಲ. ಬೆಂಗಳೂರು ಮೆಟ್ರೊ ನೀಡಿರುವ ಜಾಹೀರಾತಿನಲ್ಲಿ ಸಹ ಅಶೋಕ ಅವರ ಹೆಸರಿಲ್ಲ.

ವಿಜಯೇಂದ್ರ ಅವರಿಗೆ ಆಹ್ವಾನ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನ ಶಾಸಕರಲ್ಲದಿದ್ದರೂ, ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.