ಬೆಂಗಳೂರು: ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ವೈದ್ಯರ ಜೊತೆ ಚರ್ಚೆ ನಡೆಸಿದರು.

ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ, ಶಸ್ತ್ರಚಿಕಿತ್ಸೆಯ ನಂತರ ಶ್ವಾಸಕೋಶದ ಸೋಂಕು ಉಲ್ಬಣಗೊಂಡಿತ್ತು. ಹೀಗಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕಿಮ್ಸ್ ಆಸ್ಪತ್ರೆ) ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸುಧಾಕರ್ ಅವರ ಚಿಕಿತ್ಸೆ ಮತ್ತು ಪ್ರಸ್ತುತ ಆರೋಗ್ಯ ಸ್ಥಿತಿಗತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡ ಶಿವಕುಮಾರ್, ಸುಧಾಕರ್ ಅವರ ಕುಟುಂಬ ಸದಸ್ಯರೊಂದಿಗೂ ಚರ್ಚೆ ನಡೆಸಿದರು. ಈ ವೇಳೆ ಶಾಸಕ ರಘುಮೂರ್ತಿ ಜೊತೆಗಿದ್ದರು.

‘ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ಯ ಮುಚ್ಚಿಟ್ಟಿದ್ದಾರೆ’

ಚಿತ್ರದುರ್ಗ: ‘ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರದಲ್ಲಿ ಕೆಲ ವಿಷಯವನ್ನು ಮುಚ್ಚಿಟ್ಟಿದ್ದಾರೆ. ಎಷ್ಟು ನೋವು ಅನುಭವಿಸುತ್ತಿದ್ದಾನೋ ಆತನಿಗೆ ಗೊತ್ತು. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ಯವನ್ನು ಮುಚ್ಚಿಡಲಾಗುತ್ತಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಆರೋಪಿಸಿದರು.

‘ಕೆಲ ವ್ಯಕ್ತಿಗಳು ಇಂಥ ಸಮಯ ದುರ್ಬಳಕೆ ಮಾಡಿಕೊಳ್ಳುವಲ್ಲಿ ಪರಿಣತರು. ಸತ್ಯವನ್ನೇ ಮುಂದೂಡುತ್ತಿದ್ದಾರೆ. ಯಾಕೆ ಕೆಲ ವಿಷಯ ಮುಚ್ಚಿಟ್ಟಿದ್ದಾರೆ ಎಂಬುದು ಬಹಿರಂಗವಾಗಬೇಕು. ನಾವು ಇತಿಹಾಸ ನೋಡಿದ್ದೇವೆ. ಇಂಥ ವಿಚಾರಗಳನ್ನು ನಾನು ಚರ್ಚೆ ಮಾಡುವುದಿಲ್ಲ’ ಎಂದು ಭಾನುವಾರ
ಮಾಧ್ಯಮದವರಿಗೆ ತಿಳಿಸಿದರು.

‘ಇಂತಹ ಸಮಯದಲ್ಲಿ ನಾನು ಜೆಡಿಎಸ್ ಸ್ಥಾನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತನಾಡು
ವುದಿಲ್ಲ. ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.