ಬೆಂಗಳೂರು: ‘ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಬೇಗ ಮಾಡಿದರೆ ಒಳ್ಳೆಯದು. ಯಾಕೆ ಮುಂದೂಡಲಾಗುತ್ತಿದೆ ಎನ್ನುವುದಕ್ಕೆ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು’ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂನ್ 30ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿದೆ. ಸೆಪ್ಟಂಬರ್ವರೆಗೂ ಅವಕಾಶ ನೀಡುವಂತೆ ರಾಜ್ಯ ಸರ್ಕಾರದಿಂದ ಮನವಿ ಸಲ್ಲಿಸಿರುವ ಕುರಿತು ಡಿ.ಕೆ.ಶಿವಕುಮಾರ್ ಅವರನ್ನು ಕೇಳಬೇಕು. ಕಾಲಕಾಲಕ್ಕೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು. ಪಾಲಿಕೆ ಸದಸ್ಯರ ಕೆಲಸವನ್ನೂ ನಾವೇ ಮಾಡುತ್ತಿದ್ದೇವೆ. ಹಿಂದೆ ಬಿಜೆಪಿ ಮಾಡಿದ್ದನ್ನೇ ನಾವು ಈಗ ಮಾಡಿದರೆ ಸರಿಯಾಗುವುದಿಲ್ಲ. ಈಗ ಚುನಾವಣೆ ನಡೆದರೂ ಕಾಂಗ್ರೆಸ್ ಐದು ನಗರಪಾಲಿಕೆಗಳಲ್ಲೂ ಗೆಲ್ಲುವ ವಿಶ್ವಾಸವಿದೆ’ ಎಂದರು.

‘ಬೆಂಗಳೂರಿನ ಅಭಿವೃದ್ದಿಗೆ ಕಾಂಗ್ರೆಸ್ ಕೊಡುಗೆ ಶೇ 90ರಷ್ಟಿದೆ. ಪ್ರತಿ ವಾರ್ಡ್ನಲ್ಲಿ ಶೇ 75ರಷ್ಟು ಮತ ನಮಗೆ ಬರಲಿವೆ. ರಾಜ್ಯದಲ್ಲಿ ನಡೆದಿರುವ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದಿದ್ದೇವೆ. ಬೆಂಗಳೂರು ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಗೆದ್ದಿದ್ದರು. ಪಾಲಿಕೆ ಚುನಾವಣೆಯಲ್ಲಿ ಫಲಿತಾಂಶ ಏನೋ ಆಗಲಿದೆ ಎಂದು ಭಯಪಡುವ ಅಗತ್ಯ ಇಲ್ಲ’ ಎಂದು ಹೇಳಿದರು.

‘ಕರ್ನಾಟಕದಲ್ಲಿ ಎರಡೂವರೆ ವರ್ಷದ ಆಡಳಿತದ ಬಳಿಕ ಕೆಲವರು ಸಚಿವರಾಗುವ ಆಸೆ ಹೊಂದಿದ್ದಾರೆ. ಇದಾಗಿ ಆರು ತಿಂಗಳೇ ಕಳೆದು ಹೋಗಿದೆ. ಅಧಿಕಾರ ಹಂಚಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನಂತೂ ನವದೆಹಲಿಗೆ ಹೋಗಿಲ್ಲ. ಈ ಗೊಂದಲಗಳಿಗೆ ಬೇಗನೇ ತೆರೆ ಎಳೆಯಬೇಕು’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-1991226673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.