ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮುಸ್ಲಿಂ ಸಮುದಾಯದ ಧರ್ಮ ಗುರುಗಳು ದೂರಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮಿಯತ್ ಉಲಮಾ ಬೆಂಗಳೂರು ಘಟಕದ ಅಧ್ಯಕ್ಷ ಮಹಮ್ಮದ್ ಸಲಾಹುದ್ದೀನ್ ಅಯ್ಯೂಬಿ, ಬನ್ನೇರುಘಟ್ಟ ರಸ್ತೆಯ ಬಿಲಾಲ್ ಮಸೀದಿಯ ಮಹಮ್ಮದ್ ಶಾಕೀರುಲ್ಹಾ ರಶಾದಿ, ‘ದಾವಣಗೆರೆಯ ಉಪ ಚುನಾವಣೆಯ ನಂತರ ಯಾವುದೇ ನೋಟಿಸ್ ನೀಡದೇ ನಮ್ಮ ಮುಖಂಡರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ಅವರ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಶಿಸ್ತು ಕ್ರಮ ಖಂಡನೀಯ. ಇದನ್ನು ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಕಾಂಗ್ರೆಸ್ಗೆ ಮುಸ್ಲಿಮರ ಅವಶ್ಯಕತೆ ಇದೆ. ಮುಸ್ಲಿಮರಿಗೆ ಕಾಂಗ್ರೆಸ್ನ ಅವಶ್ಯಕತೆ ಇಲ್ಲ. ನಮ್ಮ ಸಮುದಾಯದವರು 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ.ಈಗ ನಮ್ಮ ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿರುವುದು ಸರಿಯಲ್ಲ. ನಸೀರ್ ಅಹಮದ್ ಹಾಗೂ ಅಬ್ದುಲ್ ಜಬ್ಬಾರ್ ಸೇರಿದಂತೆ ನಮ್ಮ ಸಮುದಾಯದ ಮುಖಂಡರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು’ ಎಂದರು.

‘ರಾಜ್ಯದಲ್ಲಿ 65 ಲಕ್ಷ ಮುಸ್ಲಿಂ ಮತದಾರರು ಇದ್ದಾರೆ. ಇವರೆಲ್ಲರೂ ನಿಮ್ಮ ವಿರುದ್ಧ ಹೋದರೆ ಏನಾಗುತ್ತದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಯೋಚಿಸಬೇಕು. ಸಂವಿಧಾನಬದ್ಧವಾಗಿ ನಮಗೆ ಸಿಗುವ ಹಕ್ಕು ಹಾಗೂ ಅಧಿಕಾರವನ್ನು ನೀಡಬೇಕು. ಇಲ್ಲದಿದ್ದರೆ ನಾವು ಅದನ್ನು ಕಸಿದುಕೊಳ್ಳುತ್ತೇವೆ’ ಎಂದರು.

‘ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಇದುವರೆಗೂ ಹಿಜಾಬ್, ಮೀಸಲಾತಿ ಸಮಸ್ಯೆಗಳಿಗೆ ಪರಿಹಾರ ನೀಡಿಲ್ಲ. ಗೋಹತ್ಯೆ, ಮತಾಂತರ ಕಾಯ್ದೆಗಳ ಕುರಿತು ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ’ ಎಂದರು.

ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಮಾತನಾಡಿ, ‘ನಮ್ಮ ನಾಯಕರ ವಿರುದ್ಧ ಕೈಗೊಂಡಿರುವ ಶಿಸ್ತು ಕ್ರಮವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ತ್ರಿಬಲ್ ತಲಾಕ್ ನೀಡುತ್ತೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-1134744053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.