ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳಿಗೆ ಸದ್ಯದಲ್ಲೇ ಚುನಾವಣೆ ಘೋಷಣೆಯಾಗುವುದು ಖಚಿತವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿದರು.

ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಭಾನುವಾರ ನಡೆದ ಸಭೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೂಡಾ ಇದ್ದರು.

ಇತ್ತೀಚೆಗೆ ರಾಜ್ಯ ಚುನಾವಣಾ ಆಯುಕ್ತರು ಜಿ.ಎಸ್. ಸಂಗ್ರೇಶಿ ಅವರು ಜೂನ್ ಮಧ್ಯದಲ್ಲಿ ಜಿಬಿಎ ನಗರ ಪಾಲಿಕೆಗಳ ಚುನಾವಣೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.ಸುರ್ಜೇವಾಲಾ ಜೊತೆ ನಡೆದ ಸಭೆಯಲ್ಲಿ ಚುನಾವಣೆ ಮುಂದೂಡಲು ಸರ್ಕಾರದ ಮುಂದಿರುವ ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸಿದರು ಎಂದು ಗೊತ್ತಾಗಿದೆ.

ಯಾವುದಾದರೂ ಕಾರಣ ನೀಡಿ ಸುಪ್ರೀಂ ಕೋರ್ಟ್ ಎದುರು ಹೆಚ್ಚುವರಿ ಕಾಲಾವಕಾಶ ನೀಡಲು ಅವಕಾಶಗಳಿ ವೆಯೇ ಎಂಬ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಲ್ಲದೆ, ಯಾವಾಗ ಚುನಾವಣೆ ಘೋಷಣೆಯಾದರೂ ಪಕ್ಷ ಸಂಪೂರ್ಣವಾಗಿ ಚುನಾವಣೆ ಸಜ್ಜಾಗಿರಬೇಕು ಎಂದು ನಿರ್ಧರಿಸಲಾಗಿದೆ.

ಎಸ್ಐಆರ್ ಬಗ್ಗೆಯೂ ಚರ್ಚೆ: ಸಭೆಯಲ್ಲಿ ಎಸ್ಐಆರ್ ಹಾಗೂ ಅದರ ಪರಿಣಾಮಗಳ ಕುರಿತು ಬಗ್ಗೆಯೂ ಚರ್ಚಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್ಐಆರ್ ಬಗ್ಗೆ ವಿವಿಧ ಸಂಘಟನೆಗಳ ಜೊತೆ ಸಭೆ ನಡೆದಿತ್ತು. ಆ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಎಸ್ಐಆರ್ ಬಗ್ಗೆ ರಾಜ್ಯ ಸರ್ಕಾರ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಕುರಿತುಪ್ರಾಥಮಿಕವಾಗಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-4-1959942634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.