ಬೆಂಗಳೂರು: ರೋಗಿಯ ಜೀವನ ಗುಣಮಟ್ಟ ಸುಧಾರಣೆಗೆ ಸಹಕಾರಿಯಾದ ಉಪಶಮನ ಆರೈಕೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ರಚಿಸಿದೆ.

ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆ ಒದಗಿಸಲು ಇಲಾಖೆ ಮುಂದಾಗಿದೆ. ಹೀಗಾಗಿ, ಉಪಶಮನ ಆರೈಕೆಗೆ ಸಂಬಂಧಿಸಿದಂತೆ ಯೋಜನೆ ರೂಪಿಸಲು, ಪರಿ ಣಾಮಕಾರಿಯಾಗಿ ಅನುಷ್ಠಾನ ಮಾಡಲು ಹಾಗೂ ನಿಗಾ ವಹಿಸಲು ಸಮಿತಿ ರಚಿಸಲಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿ ರಾಜ್ ಕುಮಾರ್ ಖತ್ರಿ ಸಮಿತಿ ಅಧ್ಯಕ್ಷರಾಗಿದ್ದಾರೆ.

ಆರೋಗ್ಯ ಇಲಾಖೆ ನಿರ್ದೇಶಕರು, ಸಾಂಕ್ರಾಮಿಕ ವಲ್ಲದ ರೋಗಗಳ ವಿಭಾಗದ ಉಪ ನಿರ್ದೇಶಕರು, ಮಾನಸಿಕ ಆರೋಗ್ಯ ವಿಭಾಗದ ಉಪ ನಿರ್ದೇಶಕರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಉಪಶಮನ ಔಷಧ ತಜ್ಞರಾದ ಡಾ.ಅನುರಾಧಾ ಗಾಣಿಗರ, ಡಾ.ಯಧುರಾಜ್ ಗೌಡ, ಡಾ. ರಜನಿ ಸುರೇಂದ್ರ ಭಟ್ ಹಾಗೂ ಡಾ. ನಂದಿನಿ ವಲ್ಲತ್ ಅವರು ಸಮಿತಿಯಲ್ಲಿದ್ದು, ವಿಷಯ ತಜ್ಞರಾಗಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಸಹ ಈ ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿಯು ಉಪಶಮನ ಆರೈಕೆ ಸಂಬಂಧಿಸಿದಂತೆ ನೀತಿ ಮತ್ತು ಮಾರ್ಗಸೂಚಿಗಳನ್ನು ರೂಪಿಸುವ ಜತೆಗೆ, ಆರೈಕೆಗೆ ಸಂಬಂಧಿಸಿದಂತೆ ಪರಿಶೀಲನೆ, ಮಾರ್ಗದರ್ಶನ ಸೇರಿ ಉಪಶಮನ ಆರೈಕೆಯನ್ನು ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಒದಗಿಸಲು ಶ್ರಮಿಸಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-4-746178900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.