ಬೆಂಗಳೂರು: ‘ಕಳೆದ ಐದು ವರ್ಷಗಳಲ್ಲಿ ನಡೆದಿರುವ ಪೊಲೀಸ್ ಕಸ್ಟಡಿ ಸಾವುಗಳ ತನಿಖೆ, ಪ್ರಾಸಿಕ್ಯೂಷನ್, ಸಂತ್ರಸ್ತರಿಗೆ ಪರಿಹಾರ ಮತ್ತು ಸರ್ಕಾರಕ್ಕೆ ಸೂಕ್ತಶಿಫಾರಸು ಮಾಡಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು’ ಎಂಬ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಈ ಸಂಬಂಧ, ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್–ಕರ್ನಾಟಕ’ (ಪಿಯುಸಿಎಲ್) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇ.ಶುಜಾಯತ್ ಉಲ್ಲಾ ಮತ್ತು ‘ನ್ಯಾಯಕ್ಕಾಗಿ ಕೈದಿ ಕುಟುಂಬಗಳ ಸಂಘ’ದ ಸಂಚಾಲಕಿ ವಿ.ಚಂದ್ರಶ್ರೀ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಮುಖ್ಯ ನ್ಯಾಯಮೂರ್ತಿ (ಸಿಜೆ) ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠ, ‘ಕಸ್ಟಡಿ ಸಾವುಗಳ ಕುರಿತು ಈಗಾಗಲೇ ಹಲವು ತೀರ್ಪುಗಳು ಬಂದಿವೆ. ನಿಮಗೆ ಯಾವ ಆದೇಶ ಬೇಕು’ ಎಂದು ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕ್ಲಿಫ್ಟನ್ ರೋಜಾರಿಯೊ ಅವರನ್ನು ಪ್ರಶ್ನಿಸಿತು. ಇದಕ್ಕೆ ಕ್ಲಿಫ್ಟನ್, ‘ಅರ್ಜಿದಾರರು ಕಸ್ಟಡಿ ಸಾವಿನ ಬಗ್ಗೆ ಪರಿಹಾರ ಕೋರುತ್ತಿಲ್ಲ, ಕಸ್ಟಡಿಯಲ್ಲಿನ ಕಿರುಕುಳದ ಬಗ್ಗೆ ಕೇಳುತ್ತಿದ್ದಾರೆ’ ಎಂದರು.

ಇದಕ್ಕೆ ನ್ಯಾಯಪೀಠವು, ‘ಕಸ್ಟಡಿಯಲ್ಲಿನ ಕಿರುಕುಳದ ಬಗ್ಗೆಯೂ ಹಲವು ತೀರ್ಪುಗಳು ಬಂದಿವೆ. ವ್ಯಕ್ತಿಯನ್ನು ಬಂಧಿಸಿದ ನಂತರ ಪಾಲಿಸಬೇಕಾದ ಪ್ರಕ್ರಿಯೆಗಳು ಈಗಾಗಲೇ ಚಾಲ್ತಿಯಲ್ಲಿವೆ. ಪ್ರಕ್ರಿಯೆ ಉಲ್ಲಂಘಿಸಿದ ಪ್ರಕರಣಗಳಲ್ಲಿ ನಿರ್ದೇಶನ ನೀಡಬಹುದು. ಕಿರುಕುಳ ನೀಡಿರುವುದು ಸಾಬೀತಾದ ಪ್ರಕರಣಗಳಲ್ಲಿ ಅಧಿಕಾರಿಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹಲವು ಆದೇಶಗಳಲ್ಲಿ ಸಂತ್ರಸ್ತರಿಗೆ ಪರಿಹಾರಕ್ಕೆ ಆದೇಶಿಸಿದೆ’ ಎಂಬ ಅಂಶಗಳನ್ನು ಉಲ್ಲೇಖಿಸಿತು.

ನೋಟಿಸ್: ಅರ್ಜಿದಾರರ ಐದು ಕೋರಿಕೆಗಳ ಪೈಕಿ 2025ರ ನವೆಂಬರ್ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುವಕನನ್ನು ಠಾಣೆಗೆ ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪಕ್ಕೆ ಸಂಬಂಧಿಸಿದಂತೆ ವಿವೇಕನಗರ ಠಾಣಾ ಪೊಲೀಸರ ವಿರುದ್ಧ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ.

‘ದರ್ಶನ್ ಸಾವಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು. ಕಾಲಮಿತಿಯಲ್ಲಿ ಹೈಕೋರ್ಟ್ ನಿಗಾದಲ್ಲಿ ತನಿಖೆ ಕೈಗೊಳ್ಳಬೇಕು. ದರ್ಶನ್ ಕುಟುಂಬದವರಿಗೆ ₹50 ಲಕ್ಷ ಪರಿಹಾರಕ್ಕೆ ಆದೇಶಿಸಬೇಕು. ದರ್ಶನ್ ಕುಟುಂಬದವರಿಗೆ ರಕ್ಷಣೆ ಒದಗಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಈ ಕೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.