ಬೆಂಗಳೂರು: ಜನಸಂಖ್ಯೆ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ಪೊಲೀಸ್ ಕಮಿಷನರೇಟ್ ಅನ್ನು ಪುನರ್ರಚಿಸುವ ಕುರಿತು ಪರಿಶೀಲಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ನ ಕೆ.ಗೋವಿಂದರಾಜ್ ಅವರು ಈ ಕುರಿತು ಮಾಡಿದ ಪ್ರಸ್ತಾಪಕ್ಕೆ ಅವರು ಉತ್ತರಿಸಿದರು.

ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆಗೆ ಕಮಿಷನರ್, ಹೆಚ್ಚುವರಿ ಕಮಿಷನರ್, ಇಬ್ಬರು ಜಂಟಿ ಕಮಿಷನರ್ (ಕಾನೂನು ಸುವ್ಯವಸ್ಥೆ ಮತ್ತು ಸಂಚಾರ) ಹಾಗೂ 11 ಡಿಸಿಪಿಗಳು (ಕಾನೂನು ಸುವ್ಯವಸ್ಥೆ), ನಾಲ್ವರು ಡಿಸಿಪಿಗಳು (ಸಂಚಾರ) ಮತ್ತು ಇಬ್ಬರು ಡಿಸಿಪಿಗಳು (ಅಪರಾಧ) ಇದ್ದಾರೆ. ನಗರದ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಪೊಲೀಸ್ ವ್ಯವಸ್ಥೆ ಬಲಪಡಿಸಲು ಈಗಾಗಲೇ ಚರ್ಚಿಸಲಾಗಿದೆ ಎಂದರು.

ಪಾದಚಾರಿ ಮಾರ್ಗ ಅತಿಕ್ರಮಣ ತೆರವು:

ಕೆಂಪೇಗೌಡ ರಸ್ತೆಯಲ್ಲಿ (ಮೈಸೂರು ಬ್ಯಾಂಕ್ ಬಳಿ) ಪಾದಚಾರಿ ಮಾರ್ಗಗಳ ಅತಿಕ್ರಮಣ ಮತ್ತು ಅನಧಿಕೃತ ವಾಹನ ನಿಲುಗಡೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ ಎಂದು ಪರಮೇಶ್ವರ ಹೇಳಿದರು.

ಕಾಂಗ್ರೆಸ್ನ ರಮೇಶ್ ಬಾಬು ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಪಾದಚಾರಿ ಮಾರ್ಗಗಳಲ್ಲಿ ಶೆಡ್ ನಿರ್ಮಿಸಿರುವುದು, ವಾಹನ ನಿಲುಗಡೆ ಮಾಡುತ್ತಿರುವುದನ್ನು ಗುರುತಿಸಲಾಗಿದೆ. ನಗರಪಾಲಿಕೆ, ಗಾಂಧಿನಗರ ವಾರ್ಡ್ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.