ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಮಂಜೂರು ಮಾಡಿರುವ ಜಮೀನನ್ನು ರಕ್ಷಿಸುವ ಕರ್ನಾಟಕ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪಂಗಡಗಳ (ಎಸ್ಟಿ) (ಕೆಲವು ಭೂಮಿಗಳ ವರ್ಗಾವಣೆ ನಿಷೇಧ– ಪಿಟಿಸಿಎಲ್) ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ಎನ್. ವೆಂಕಟೇಶ್, ಕೋಟಿಗಾನಹಳ್ಳಿ ರಾಮಯ್ಯ, ಹೆಣ್ಣೂರು ಶ್ರೀನಿವಾಸ್, ‘ಪಿಟಿಸಿಎಲ್ ಕಾಯ್ದೆಯ ವಿರುದ್ಧ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್ಪಿ) ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬಾರದು’ ಎಂದು ಒತ್ತಾಯಿಸಿದರು.

‘ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಪ್ರತಿವರ್ಷ ₹500 ಕೋಟಿ ಅನುದಾನ ಮೀಸಲಿಡಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟರ ಮಕ್ಕಳಿಗೆ ಸರಿಯಾದ ಸಮಯಕ್ಕೆ ಶುಲ್ಕ ಮರುಪಾವತಿ ಮಾಡಬೇಕು. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು’ ಎಂದರು.

‘ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪ್ರಮಾಣವನ್ನು ಹಂಚಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಒಳ ಮೀಸಲಾತಿಯನ್ನು ಜಾರಿಗೊಳಿಸಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-4-1004992148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.