ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ನಾನು ಬಳಸುವ ಕಾರುಗಳ ಪೆಟ್ರೋಲ್ ಮತ್ತು ಡೀಸೆಲ್ ಪ್ರಮಾಣವನ್ನು ಶೇ 30ರಿಂದ ಶೇ 50 ರಷ್ಟು ಕಡಿಮೆ ಮಾಡುತ್ತೇನೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಬೆಂಗಾವಲು ವಾಹನ ಬಳಸುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪೆಟ್ರೋಲಿಯಂ ಉತ್ಪನ್ನಗಳ ಮಿತ ಬಳಕೆ, ಒಂದು ವರ್ಷ ಚಿನ್ನ ಖರೀದಿ ಮಾಡದೇ ಇರುವುದು ಸೇರಿ ವಿವಿಧ ವಿಷಯಗಳ ಕುರಿತು ಮನವಿ ಮಾಡಿದ್ದಾರೆ. ಅದಕ್ಕೆ ನಾವು ಸ್ಪಂದಿಸುತ್ತೇವೆ’ ಎಂದರು.

‘ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕಾರಣ ಪ್ರಪಂಚವೇ ಸಂಕಷ್ಟದಲ್ಲಿದೆ. ಪ್ರಧಾನಿಯವರ ಕೋರಿಕೆಗೆ ಸಾರ್ವಜನಿಕರೂ ಸ್ಪಂದಿಸುತ್ತಿದ್ದಾರೆ. ಮನೆಯಲ್ಲಿ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡಲು ನನ್ನ ಮನೆಯಲ್ಲಿ ಹೇಳಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-499428154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.