ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ. 1/5
ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ @JnanendraAraga ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ. 3/5#LawAndOrder
ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ @JnanendraAraga ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ. 4/5#LawAndOrder
ಗೃಹ ಸಚಿವ @JnanendraAraga ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ ಮಾಡುತ್ತೇನೆ. 5/5#LawAndOrder