ಬೆಂಗಳೂರು: ‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಮಾಡಿರುವ ವರ್ಗೀಕರಣದಿಂದ ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಹಲವು ಸಮುದಾಯಗಳ ಮುಖಂಡರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತು ಸರ್ದಾರ್ ಸೇವಾಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಿದರು.

‘ಇದೇ 24ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಯಾರನ್ನೋ ಓಲೈಸುವ ಸಲುವಾಗಿ ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ’ ಎಂದು ಸಭೆಯ ನಂತರ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕೂಟವು, ‘ಒಂದೇ ಸ್ವರೂಪದ ಜಾತಿ ಸಮುದಾಯಗಳನ್ನು, ಒಂದೇ ಪ್ರವರ್ಗಕ್ಕೆ ಸೇರಿಸಬೇಕಿತ್ತು. ಆದರೆ ‘ಸಿ’ ಪ್ರವರ್ಗದಲ್ಲಿ ಎಡಗೈ ಸಮುದಾಯದ ಒಂಬತ್ತು ಜಾತಿಗಳು ಮತ್ತು ಬಲಗೈ ಸಮುದಾಯದ 16 ಜಾತಿಗಳನ್ನೂ ಸೇರಿಸಲಾಗಿದೆ. ಈ ಪ್ರಮಾದವನ್ನು ಸರಿಪಡಿಸಬೇಕು. ಅತಿ ಹಿಂದುಳಿದಿರುವ 64 ಜಾತಿಗಳು ಇರುವ ಪ್ರವರ್ಗ ‘ಸಿ’ಗೆ ಶೇ 5ರಷ್ಟು ಒಳಮೀಸಲಾತಿ ಒದಗಿಸಬೇಕು. ನ್ಯಾಯಬದ್ಧವಾಗಿ ‘ಸಿ’ ಪ್ರವರ್ಗವನ್ನೇ ಮೊದಲ ಗುಂಪನ್ನಾಗಿ ಘೋಷಿಸಬೇಕು. ನೇಮಕಾತಿ ರೋಸ್ಟರ್ ಬಿಂದುವಿನಲ್ಲಿ ಈ ಸಮುದಾಯಗಳಿಗೆ ಅನ್ಯಾಯವಾಗಬಾರದು’ ಎಂದು ಒತ್ತಾಯಿಸಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಡಲಾಗುವುದು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದೆ.

ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ, ಕರ್ನಾಟಕ ಕೊರಚ ಮಹಾಸಭಾದ ಅಧ್ಯಕ್ಷ ಆದರ್ಶ ಯಲ್ಲಪ್ಪ, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರ ನಾಯ್ಕ, ಮಾಜಿ ಶಾಸಕ ಭೀಮಾನಾಯ್ಕ್ ಸೇರಿ ಹಲವು ಸಮುದಾಯಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-1212056249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.