ನವದೆಹಲಿ: ‘ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್ಟಿಆರ್ಆರ್) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ 'ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' ಒಪ್ಪಿಗೆ ನೀಡಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ ಕುಮಾರಸ್ವಾಮಿ, ಶೀಘ್ರವೇ ಈ ಯೋಜನೆಗೆ ಸಂಪುಟದ ಅನುಮೋದನೆ ಕೊಡಿಸುವಂತೆ ಮನವಿ ಮಾಡಿದರು.

‘ಉಪನಗರ ವರ್ತುಲ ರಸ್ತೆ ಯೋಜನೆ 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ನನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು’ ಎಂದು ಕುಮಾರಸ್ವಾಮಿ ಹೇಳಿದರು.

4- 6 ಪಥಗಳ ಈ ಯೋಜನೆಯು ದಾಬಸ್ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಹಾಗೂ ಬೆಂಗಳೂರು - ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶ ಎಂದು ಸಚಿವರು ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.