ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಭಾರಿ ಸಂಚಾರ ದಟ್ಟಣೆ ಹಾಗೂ ಕಳಪೆ ರಸ್ತೆಯ ಸ್ಥಿತಿಯಿಂದಾಗಿ ಹೊರ ವರ್ತುಲ ರಸ್ತೆಯ ಕಾಡುಬೀಸನಹಳ್ಳಿಯ ವಸ್ವಾನಿ ಪ್ರೆಸಿಡೊದಿಂದ ಸ್ಥಳಾಂತರಗೊಳ್ಳುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ ಕಂಪನಿ ‘ಬ್ಲ್ಯಾಕ್ಬಕ್’ (BlackBuck) ಹೇಳಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, 'ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ?, ಜಿಬಿಎ ಏನು ಮಾಡುತ್ತಿದೆ?, ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ'? ಎಂದು ಪ್ರಶ್ನಿಸಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಗುಂಡಿಪಾಲು

'ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರ್ಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರ್ಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ತೆರಿಗೆ ಹಾಕುವುದರಲ್ಲಿ ಸರ್ಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ. ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರ್ಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ?, ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಎಂದು ಆಗ್ರಹಿಸಿದ್ದಾರೆ.

ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಅವರು ದೂರಿದ್ದಾರೆ.

ಬೆಂಗಳೂರು ತೊರೆಯಬೇಡಿ

ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ ಎಂದೂ ಅವರು ಮನವಿ ಮಾಡಿದ್ದಾರೆ
.ಸರ್ಕಾರದ ವೈಫಲ್ಯ: ರಸ್ತೆಗುಂಡಿ, ಸಂಚಾರ ದಟ್ಟಣೆ ಬಗ್ಗೆ ಪೈ, ಮಜುಂದಾರ್ ಷಾ ಆಕ್ರೋಶ.
ಬೆಳ್ಳಂದೂರು ತೊರೆಯುವುದಾಗಿ ಹೇಳಿದ ಕಂಪನಿ

ಭಾರಿ ಸಂಚಾರ ದಟ್ಟಣೆ ಹಾಗೂ ಕಳಪೆ ರಸ್ತೆಯ ಸ್ಥಿತಿಯಿಂದಾಗಿ ಹೊರ ವರ್ತುಲ ರಸ್ತೆಯ ಕಾಡುಬೀಸನಹಳ್ಳಿಯ ವಸ್ವಾನಿ ಪ್ರೆಸಿಡೊದಿಂದ ಸ್ಥಳಾಂತರಗೊಳ್ಳುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ ಕಂಪನಿ ‘ಬ್ಲ್ಯಾಕ್ಬಕ್’ (BlackBuck) ಹೇಳಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಂಪನಿಯ ಸಹ ಸಂಸ್ಥಾಪಕ ಹಾಗೂ ಸಿಇಒ ರಾಜೇಶ್ ಯಬಾಜಿ, ‘ಹೊರವರ್ತುಲ ರಸ್ತೆಯ ಬೆಳ್ಳಂದೂರು ಕಳೆದ 9 ವರ್ಷಗಳಿಂದ ನಮ್ಮ ಮನೆಯೂ ಕಚೇರಿಯೂ ಆಗಿತ್ತು. ಆದರೆ ಈಗ ಅಲ್ಲಿ ಮುಂದುವರಿಯಲು ಭಾರಿ ಕಷ್ಟವಾಗುತ್ತಿದೆ. ನನ್ನ ಸಹೋದ್ಯೋಗಿಗಳಿಗೆ ಪ್ರಯಾಣ ಸಮಯ ಒಂದೂವರೆ ಗಂಟೆ ತಗುಲುತ್ತದೆ, ಹೀಗಾಗಿ ನಾವು ಸ್ಥಳಾಂತರಗೊಳ್ಳಲು ನಿರ್ಧರಿಸಿದ್ದೇವೆ. ರಸ್ತೆ ತುಂಬಾ ಗುಂಡಿಗಳಿವೆ, ದೂಳು ಆವರಿಸಿಕೊಂಡಿದೆ. ಅದನ್ನು ಸರಿ ಮಾಡುವ ಕನಿಷ್ಠ ಉಮೇದು ಕೂಡ ಕಾಣಿಸುತ್ತಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಇರುವ ಸಮಸ್ಯೆಗಳು ಐದು ವರ್ಷವಾದರೂ ಪರಿಹಾರವಾಗುವ ಭರವಸೆ ಇಲ್ಲ ಎಂದು ಹೇಳಿದ್ದಾರೆ.
.ಸಂಚಾರ ದಟ್ಟಣೆ, ರಸ್ತೆಗುಂಡಿ: ಬೆಳ್ಳಂದೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.