ಬೆಂಗಳೂರು: ‘ಯಾವುದೇ ಒಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಅದಕ್ಕೆ ತನಿಖಾಧಿಕಾರಿ ನೇಮಕವಾದಲ್ಲಿ, ಆ ಪ್ರಕರಣದ ತನಿಖೆ ಪೂರ್ಣಗೊಂಡು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಆಗುವ ತನಕ ತನಿಖಾಧಿಕಾರಿಯನ್ನು ವರ್ಗಾವಣೆ ಮಾಡಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಆರೋಪಿಯ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕು’ಎಂದು ಕೋರಿ ‘ಮೆಸರ್ಸ್ ನ್ಯೂ ಸ್ಪೇಸ್ ರಿಸರ್ಚ್ ಆಂಡ್ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ಕಂಪನಿ’ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆಯಲ್ಲಿ ನ್ಯಾಯಪೀಠ, ‘ಎಸ್ಐಟಿ ರಚಿಸಿ ಒಂದು ವರ್ಷ ಕಳೆದಿದೆ. ಆದರೂ ವಿಚಾರಣೆಯನ್ನು ಏಕೆ ಪೂರ್ಣ ಗೊಳಿಸಿಲ್ಲ’ ಎಂದು ಪ್ರಶ್ನಿಸಿತ್ತು. ಇದಕ್ಕೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಐ.ಎಸ್.ಪ್ರಮೋದಚಂದ್ರ, ‘ತನಿಖಾಧಿಕಾರಿಯನ್ನು ಮತ್ತೊಂದು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಆದ್ದರಿಂದ, ವಿಳಂಬಕ್ಕೆ ಕಾರಣವಾಗಿದೆ’ ಎಂದು ತಿಳಿಸಿದ್ದರು.

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಪೀಠ, ‘ಎಸ್ಐಟಿ ರಚನೆ ಮಾಡಿ ತನಿಖಾಧಿಕಾರಿ ನೇಮಕ ಮಾಡಿದ ಬಳಿಕ ಆಡಳಿತಾತ್ಮಕ ಕಾರಣಗಳಿದ್ದರೂ, ದೋಷಾರೋಪ ಪಟ್ಟಿ ಸಲ್ಲಿಸುವ ಮುನ್ನ ತನಿಖಾಧಿಕಾರಿಯನ್ನು ಬದಲಾಯಿಸಬಾರದು. ಒಂದು ವೇಳೆ ವರ್ಗಾವಣೆ ಅನಿ ವಾರ್ಯವಾದರೆ, ತನಿಖಾಧಿಕಾರಿಯು ದೋಷಾರೋಪ ಪಟ್ಟಿ ಸಲ್ಲಿಸಿದ ನಂತರವೇ ಹೊಸ ಜವಾಬ್ದಾರಿ ವಹಿಸಿಕೊಳ್ಳಬೇಕು’ ಎಂದು ಆದೇಶದಲ್ಲಿ ವಿವರಿಸಿದೆ.

ಪ್ರಕರಣವೇನು?

ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಕಂಪನಿಯಲ್ಲಿ ಕಾರ್ಯನಿರ್ವಹಿ ಸುತ್ತಿದ್ದ ಸಿಬ್ಬಂದಿ ಶ್ರೀಮತಿ ಗರಿಮಾ ಶರ್ಮಾ ವಿರುದ್ಧ ‘ಮೆಸರ್ಸ್ ನ್ಯೂ ಸ್ಪೇಸ್ ರಿಸರ್ಚ್ ಆಂಡ್ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ಕಂಪನಿ’ ಈಶಾನ್ಯ ವಿಭಾಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಇದರ ತನಿಖೆಗೆ ಎಸ್ಐಟಿ ರಚನೆ ಮಾಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿಯನ್ನೂ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮರು ತನಿಖೆಗೆ ಆದೇಶಿಸಿತ್ತು. ಇದಕ್ಕಾಗಿ, ‘ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ, ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮತ್ತು ನಿಷಾ ಜೇಮ್ಸ್ ಅವರನ್ನು ಒಳಗೊಂಡ ಸಮಿತಿ ರಚಿಸಬೇಕು. ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ನ್ಯಾಯಾಂಗ ಆದೇಶ ಹೊರಡಿಸಿತ್ತು.

ಏತನ್ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ರದ್ದು ಪಡಿಸುವಂತೆ ಕೋರಿ ದೂರುದಾರ ಕಂಪನಿ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-554719827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.