ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಸಂಬಂಧ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ವಿಷಯವನ್ನು ಈಗಾಗಲೇ ಪ್ರಸ್ತಾಪಿಸಿದ್ದು, ಗುರುವಾರ ನಡೆಯಲಿರುವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯವನ್ನು ತರಲಾಗಿದೆ.

ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ.

2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಕೆಪಿಎಸ್ಸಿಯ ಹಿಂದಿನ ಅಧ್ಯಕ್ಷ ಮತ್ತು ಹಿಂದಿನ ಎಂಟು ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಅಲ್ಲದೇ, ‘ಕರ್ನಾಟಕ ಗ್ರೀನ್ ಹೈಡ್ರೋಜನ್ ನೀತಿ 2024–29’ಕ್ಕೆ ಒಪ್ಪಿಗೆ ನೀಡುವ ಪ್ರಸ್ತಾವವೂ ಗುರುವಾರದ ಸಂಪುಟ ಸಭೆಯ ಮುಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.