ಬೆಂಗಳೂರು:  ‘ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಅವರಿಬ್ಬರ ರಾಜೀನಾಮೆಗೆ ಆಗ್ರಹಿಸಿ ಇದೇ 17ರಂದು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿ 11 ಜನ ಅಭಿಮಾನಿಗಳ ಬಲಿ ಪಡೆದಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಈ ಎಲ್ಲವನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆಯೋಜಿಸಿದ್ದು 10 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದಾರೆ’ ಎಂದರು.

ಹೊಸದಾಗಿ ಜಾತಿವಾರು ಸಮೀಕ್ಷೆ ಕುರಿತ ಪ್ರಶ್ನೆಗೆ ‘ಸರ್ಕಾರದ ನಡೆ ಸ್ವಾಗತಾರ್ಹ. ಆದರೆ ಈ ಹಿಂದಿನ ಸಮೀಕ್ಷೆಗೆ ₹167 ಕೋಟಿ ಖರ್ಚು ಮಾಡಿದ್ದರ ಲೆಕ್ಕವನ್ನು ಜನರ ಮುಂದೆ ಇಡಬೇಕು’ ಎಂದು ಒತ್ತಾಯಿಸಿದರು.
.ಕಾಲ್ತುಳಿತ ಪ್ರಕರಣ: ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಆರ್.ಅಶೋಕ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.