ಬೆಂಗಳೂರು: ನಾಲ್ಕು ತಿಂಗಳ ಹಿಂದೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದೆ.

ದ್ವಿತೀಯ ಪಿಯು ವಿದ್ಯಾರ್ಥಿನಿ ತನಿಷ್ಕಾ ಹಾಗೂ ಪ್ರಥಮ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಜ.31ರಂದು ನಿಗೂಢವಾಗಿ ನಾಪತ್ತೆ ಆಗಿದ್ದರು. ಅಂದು ಮನೆಯಿಂದ ಆಧಾರ್ ಕಾರ್ಡ್ಗಳನ್ನು ತೆಗೆದುಕೊಂಡು ಹೊರಟಿದ್ದ ವಿದ್ಯಾರ್ಥಿನಿಯರು ಇದುವರೆಗೂ ವಾಪಸ್ ಬಂದಿಲ್ಲ. ಆತಂಕಗೊಂಡ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿದ್ಯಾರ್ಥಿನಿಯರು ಕೆಲವು ಜಂಕ್ಷನ್ ದಾಟುತ್ತಿರುವ ದೃಶ್ಯವು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ ಆಗಿತ್ತು. ವಿದ್ಯಾರ್ಥಿನಿಯರು ಯಾವುದೇ ಮೊಬೈಲ್ ಅಥವಾ ಎಟಿಎಂ ಕಾರ್ಡ್ಗಳನ್ನು ಬಳಸಿಲ್ಲ ಎಂಬುದು ಇದುವರೆಗೂ ನಡೆದ ತನಿಖೆಯಿಂದ ಗೊತ್ತಾಗಿದೆ. ನಾಲ್ಕು ತಿಂಗಳಿನಿಂದ ಅವರು ತಮ್ಮ ಯಾವುದೇ ಸ್ನೇಹಿತರು ಅಥವಾ ಕುಟುಂಬ ಸದಸ್ಯರನ್ನು ಸಂಪರ್ಕಿಸಿಲ್ಲ. ಹೀಗಾಗಿ, ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದರು ಎಂಬುದು ಪತ್ತೆಯಾಗಿದೆ. ಬಳಿಕ ಕೆಲವು ಸುಳಿವು ಆಧರಿಸಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ ಹಾಗೂ ಮೈಸೂರು ಸೇರಿ ದೇಶದ ಸುಮಾರು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ, ಯಾವುದೇ ಸುಳಿವು ಸಿಕ್ಕಿಲ್ಲ ಎಂದು ತನಿಖಾ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿಯರ ಪೋಷಕರು ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಹ ಸಲ್ಲಿಸಿದ್ದರು. ಅಲ್ಲದೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪೋಷಕರು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.