ಬೆಂಗಳೂರು: ಶಿಕ್ಷಕರ ಸಂಘದ ಚುನಾವಣೆಗೆ ನಗರದ ಸಿವಿಲ್ ಕೋರ್ಟ್ ಪೂರ್ಣ ಪ್ರಮಾಣದ ತಡೆ ನೀಡಿದೆ. ಜೂನ್ 29ರವರೆಗೆ ಚುನಾವಣಾ ಪ್ರಕ್ರಿಯೆ ಮುಂದುವರಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ನಾಗನಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘25ಸಾವಿರ ಅರ್ಹ ಶಿಕ್ಷಕರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು ಚುನಾವಣಾ ಪ್ರಕ್ರಿಯೆ ಆರಂಭಿಸಲಾಗಿತ್ತು. ಕೋರ್ಟ್ ತಡೆಯಾಜ್ಞೆ ಇದ್ದರೂ 10 ಜಿಲ್ಲೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಮರುಚುನಾವಣೆ ನಡೆಸಬೇಕು ಎಂದು ಸಂಘದ ಸದಸ್ಯರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೆವು. ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದ್ದು, ಸತ್ಯಕ್ಕೆ ಜಯ ಸಿಕ್ಕಿದೆ’ ಎಂದರು.

ಸಂಘದ ಖಚಾಂಚಿ ಸುರೇಶ ಶೆಡಸಾಳ್ ಮಾತನಾಡಿ, ‘ಹಲವು ತಾಲ್ಲೂಕುಗಳಲ್ಲಿ ಚುನಾವಣಾ ಕಚೇರಿಯನ್ನು ತೆರೆದಿರಲಿಲ್ಲ. ಚುನಾವಣಾಧಿಕಾರಿ ನೇಮಕ ಮಾಡಿರಲಿಲ್ಲ. ಮತದಾರರ ಪಟ್ಟಿ ನೀಡದೆ ತಮಗೆ ಬೇಕಾದ 50-60 ಶಿಕ್ಷಕರನ್ನು ಸೇರಿಸಿ, ಅಕ್ರಮವಾಗಿ ನಾಮಪತ್ರ ಪಡೆದು ಚುನಾವಣೆ ನಡೆಸಲಾಗುತ್ತಿತ್ತು. ಇಂತಹ ಎಲ್ಲ ಅಕ್ರಮಗಳಿಗೆ ಕಡಿವಾಣ ಹಾಕಲಾಗಿದೆ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ದಕ್ಷಿಣ ವಲಯ ಅಧ್ಯಕ್ಷ ಚಂದ್ರಶೇಖರ್ ಆರ್ಯ, ವಿಜಯಪುರ ಜಿಲ್ಲೆಯ ಶಿಕ್ಷಕಿ ಜಯಶ್ರೀ ಬೆಣ್ಣಿ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-4-1876876505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.