ಬೆಂಗಳೂರು: ‘28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ 18ರಿಂದ ಮೂರು ದಿನ ನಡೆಯಲಿದೆ’ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಈ ಶೃಂಗಸಭೆಯಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ತಂತ್ರಜ್ಞಾನ ಮತ್ತು ಉದ್ಯಮವನ್ನು ಒಂದೇ ವೇದಿಕೆಗೆ ತರುವ ಜಾಗತಿಕ ಕಾರ್ಯಕ್ರಮ ಇದಾಗಿದ್ದು, ಈ ಬಾರಿ ಕ್ವಾಂಟಮ್ ಕಂಪ್ಯೂಟಿಂಗ್, ಎಐ, ಸ್ಪೇಸ್ಟೆಕ್, ಹೆಲ್ತ್ ಟೆಕ್ಗೆ ವಿಶೇಷ ಗಮನ ನೀಡಲಾಗುವುದು’ ಎಂದರು.

‘20ರಂದು ಫ್ಯೂಚರ್ ಮೇಕರ್ಸ್ ಕಾನ್ಕ್ಲೇವ್ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚಿನ ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್ ಅಪ್ ಸಂಸ್ಥಾಪಕರು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರ ಮಾಡಿರುವವರು ಪಾಲ್ಗೊಳ್ಳಲಿದ್ದಾರೆ’ ಎಂದು ವಿವರಿಸಿದರು.

ಹೊಸ ನೀತಿ: ‘ಸ್ಟಾರ್ಟ್ ಅಪ್ ಐಟಿ ಸ್ಪೇಸ್ ಟೆಕ್ಗೆ ಹೊಸ ನೀತಿ ತರಲು ನಿರ್ಧರಿಸಲಾಗಿದೆ. ಒಟ್ಟಾರೆ, ಈ ಬಾರಿ ನೀತಿಗಳನ್ನು ಜಾಗತಿಕ ದೃಷ್ಟಿಕೋನದಲ್ಲೇ ರೂಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಸ್ಟಾರ್ಟ್ ಅಪ್, ಸ್ಪೇಸ್ ಟೆಕ್ನಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನೀತಿಯ ಮೂಲಕ ಕರ್ನಾಟಕದಲ್ಲಿರುವ ಇನ್ನಷ್ಟು ಅವಕಾಶಗಳ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು’ ಎಂದರು.

₹600 ಕೋಟಿ ಹೂಡಿಕೆ: ‘ಕರ್ನಾಟಕವನ್ನು ಭಾರತದ ಡೀಪ್ ಟೆಕ್ ರಾಜಧಾನಿಯಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ ₹ 600 ಕೋಟಿ ಹೂಡಿಕೆಗೆ ಬದ್ಧವಾಗಿದೆ. ಇದರಲ್ಲಿ ಎಐ, ಕ್ವಾಂಟಮ್ ಕಂಪ್ಯೂಟಿಂಗ್, ರೋಬೋಟಿಕ್ಸ್ ಹಾಗೂ ಸುಸ್ಥಿರತೆ ಆಧಾರಿತ ಆವಿಷ್ಕಾರಗಳಿಗೂ ಪ್ರೋತ್ಸಾಹ ನೀಡಲಾಗುವುದು’ ಎಂದೂ ಅವರು ತಿಳಿಸಿದರು.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಸಂಕನೂರ್ ಇದ್ದರು.

ಶೃಂಗಸಭೆಯ ವಿಶೇಷತೆ

* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳ ಹುಡುಕಾಟಕ್ಕೆ ಅವಕಾಶ. ಕೌಶಲಯುತ ಮಾನವ ಸಂಪನ್ಮೂಲ ಶಕ್ತಿಯ ಅನಾವರಣ

* ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರು ಮತ್ತು ನವೋದ್ಯಮಗಳಿಗೆ ಸೇತುವೆಯಾಗಿ ವೇದಿಕೆ

* ಬೆಂಗಳೂರು ಬಿಟ್ಟು ಇತರ ನಗರಗಳಲ್ಲಿ ಹೊಸದಾಗಿ ರಚಿಸುವ ಕ್ಲಸ್ಟರ್ಗಳಲ್ಲಿ ಅವಕಾಶಗಳನ್ನು ಕಲ್ಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ

* ಮುಂದಿನ ಐದು ವರ್ಷಗಳಲ್ಲಿ 50 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗ ಸೃಷ್ಟಿಯ ಗುರಿ

* ನೆರೆ ರಾಜ್ಯಗಳು ವಿವಿಧ ವಿನಾಯಿತಿ ನೀಡಿ ಹೂಡಿಕೆದಾರರನ್ನು ಸೆಳೆಯುತ್ತಿರುವುದರಿಂದ ಪೈಪೋಟಿ ನೀಡಲು ಮುಕ್ತ ಅವಕಾಶ ಕಲ್ಪಿಸುವುದು

* ನವೋದ್ಯಮಗಳಿಗೆ ಆರ್ಥಿಕ ನೆರವು ವಿನಾಯಿತಿಗಳು ಪ್ಲಗ್ ಎಂಡ್ ಪ್ಲೇನಂಥ ಸೌಲಭ್ಯಗಳನ್ನು ಪ್ರಕಟಿಸುವುದು. ಆ ಮೂಲಕ ಈ ಕ್ಷೇತ್ರದ ಬೆಳವಣಿಗೆಗೆ ಪೂರಕ ಪರಿಸರಕ್ಕೆ ಒತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.