ಬೆಂಗಳೂರು: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನೊಳಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಉಗ್ರ ಟಿ.ನಾಸೀರ್ ಸೇರಿದಂತೆ ಏಳು ಉಗ್ರರಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ, ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶ ನೀಡಿದೆ.

ಟಿ.ನಾಸೀರ್, ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಸೈಯದ್ ಮುದಾಸೀರ್ ಪಾಷಾ, ಸಲ್ಮಾನ್ ಖಾನ್, ಮೊಹಮ್ಮದ್ ಫೈಸಲ್ ರಬ್ಬಾನಿ, ಜಹೀದ್ ತಬ್ರೇಜ್ ಶಿಕ್ಷೆಗೆ ಗುರಿಯಾದ ಉಗ್ರರು.

ಲಷ್ಕರ್ ಎ ತಯಬಾ (ಎಲ್ಇಟಿ) ಸಂಘಟನೆಗೆ ಯುವಕರನ್ನು ಸೆಳೆದು ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ್ದಕ್ಕೆ ಸಂಬಂಧಿಸಿದಂತೆ 2010ರಲ್ಲಿ ದಾಖಲಾದ ಪ್ರಕರಣದಲ್ಲಿ ಟಿ.ನಾಸೀರ್ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂದಿ ಆಗಿದ್ದಾನೆ. ಈ ಪ್ರಕರಣದಲ್ಲೂ ನಾಸೀರ್ ಕೃತ್ಯವು ಸಾಬೀತಾಗಿದೆ.

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಹಾಗೂ ಯುವಕರಿಗೆ ಪ್ರಚೋದನೆ ನೀಡಿದ್ದ ಪ್ರಕರಣವು ಸಾಬೀತಾದ ಕಾರಣ ಏಳು ಉಗ್ರರಿಗೆ ಏಳು ವರ್ಷ ಜೈಲು ಹಾಗೂ ₹48 ಸಾವಿರ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಸೈಯದ್ ಮುದಾಸೀರ್ ಪಾಷಾ, ಸಲ್ಮಾನ್ ಖಾನ್, ಮೊಹಮ್ಮದ್ ಫೈಸಲ್ ರಬ್ಬಾನಿ, ಜಹೀದ್ ತಬ್ರೇಜ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜೈಲಿನಲ್ಲೇ ಇದ್ದ ಎಲ್ಇಟಿ ಸದಸ್ಯ ಟಿ.ನಾಸೀರ್, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗುವಂತೆ ಇತರರಿಗೆ ಪ್ರಚೋದನೆ ನೀಡಿದ್ದ. ಜೈಲಿನ ಒಳಗೆ ಊಟಕ್ಕೆ ಸೇರಿದಾಗ ಎಲ್ಲರೂ ಸೇರಿಕೊಂಡು ಸಂಚಿನ ಬಗ್ಗೆ ಚರ್ಚಿಸಿದ್ದರು. ಮಾಹಿತಿ ತಿಳಿದು ಸಿಸಿಬಿ ಪೊಲೀಸರು ಬಾಡಿ ವಾರಂಟ್ ಮೇಲೆ ಶಂಕಿತ ಉಗ್ರರನ್ನು ವಶಕ್ಕೆ ಪಡೆದು ಬಂಧಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-1650633514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.