ಬೆಂಗಳೂರು: ವೇತನ ಬಾಕಿ ಪಾವತಿ ಸೇರಿದಂತೆ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಬುಧವಾರ ನಡೆಸಿದ ಮಾತುಕತೆ ವಿಫಲವಾಗಿದ್ದು, ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹೇಳಿದೆ.

‘38 ತಿಂಗಳ ವೇತನ ಬಾಕಿ ನೀಡಬೇಕು. 2024ರ ಜನವರಿಯಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ಶೇ 25ರಷ್ಟು ವೇತನ ಹೆಚ್ಚಳ ಮಾಡಬೇಕು. ಇತರೆ ಬೇಡಿಕೆಗಳನ್ನು ಕಾಲಮಿತಿಯ ಒಳಗೆ ಈಡೇರಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದೆವು. ಅವರು ಶೇ 7ರಷ್ಟು ವೇತನ ಹೆಚ್ಚಳ ಮಾಡುವುದಾಗಿ, 2025ರ ಏಪ್ರಿಲ್ 1ರಿಂದ ಪರಿಗಣಿಸುವುದಾಗಿ ಹೇಳಿದರು. ಹಾಗಾಗಿ, ಮಾತುಕತೆ ಫಲಪ್ರದವಾಗಲಿಲ್ಲ’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್ ತಿಳಿಸಿದರು.

ಕೋವಿಡ್ ಸಮಯದಲ್ಲಿ ಮೃತಪಟ್ಟವರಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಈಗಾಗಲೇ ನಿವೃತ್ತರಾದ ನೌಕರರಿಗೆ ಭಾರಿ ಅನ್ಯಾಯವಾಗಿದೆ. ಇಂತಹ ವಿಷಯಗಳಲ್ಲಿ ಸರ್ಕಾರ ಸ್ಪಂದನೆ ತೋರುವ ಬದಲು, ಸಮಯ ವ್ಯರ್ಥ ಮಾಡುತ್ತಿದೆ ಎಂದು ಜ್ಯೋತಿ ದೂರಿದರು.

‘ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯ ಶಿಫಾರಸು ಆಧಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರ 2023ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಅಧಿಸೂಚನೆ ಹೊರಡಿಸಿತ್ತು. ಮೂಲವೇತನದ ಶೇ 15ರಷ್ಟು ಪರಿಷ್ಕರಣೆ ಮಾಡಲಾಗಿತ್ತು. ಆದರೆ, ಹೆಚ್ಚುವರಿ ವೇತನ ಬಾಕಿ ಪಾವತಿಸಿರಲಿಲ್ಲ. ಹಿಂದಿನ ವೇತನ ಬಾಕಿ ಕುರಿತು ಅಂದು ಸ್ಪಷ್ಟ ಆದೇಶ ಹೊರಡಿಸದ ಕಾರಣ ಇಂದಿಗೂ ಸಮಸ್ಯೆ ಬಗೆಹರಿದಿಲ್ಲ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಅಂದು ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದರೆ ಸಮಸ್ಯೆ ಮುಂದುವರಿಯುತ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ರಾಮಾಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-33-1799335474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.