ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸೌಹಾರ್ದಯುತ ಕೈಗಾರಿಕಾ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಎಐಟಿಯುಸಿ ಆಗ್ರಹಿಸಿದೆ.

‘ವೇತನ ಸಂಬಂಧಿತ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಕೆಲವು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಅವರ ಸಮಸ್ಯೆಯನ್ನು ಸಹಾನುಭೂತಿಯಿಂದ ಬಗೆಹರಿಸದಿರುವುದು ಕಾರ್ಮಿಕ ವಿರೋಧಿ ಧೋರಣೆಯಾಗಿದೆ’ ಎಂದು ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಬಾಬು ಮ್ಯಾಥ್ಯು, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ತಿಳಿಸಿದ್ದಾರೆ.

‘ರಾಜ್ಯದಲ್ಲಿ ಸುಮಾರು 1.15 ಲಕ್ಷದಷ್ಟು ಸಾರಿಗೆ ಕಾರ್ಮಿಕರು ಶ್ರಮವಹಿಸಿ ಸಮಾಜಕ್ಕೆ ಅವಿರತ ಸೇವೆ ನೀಡುತ್ತಿದ್ದಾರೆ. ಅವರ ಬದುಕಿನ ಮೂಲ ಬೇಡಿಕೆಯಾದ ವೇತನ ಪರಿಷ್ಕರಣೆ, ಕೈಗಾರಿಕಾ ಒಪ್ಪಂದಗಳ ಪ್ರಕಾರ ವೇತನ ಹಿಂಬಾಕಿಯನ್ನು ನೀಡದೇ ಶೋಷಣೆ ಮಾಡಲಾಗುತ್ತಿದೆ. ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವುದು ಕೈಗಾರಿಕಾ ಒಪ್ಪಂದಗಳ ಉಲ್ಲಂಘನೆಯಾಗಿದೆ’ ಎಂದು ಹೇಳಿದ್ದಾರೆ.

‘ಸಾರಿಗೆ ನೌಕರರು ಮೇ 19ರಂದು ಹಮ್ಮಿಕೊಂಡಿರುವ ತುಮಕೂರು ಚಲೋ, ಕಪ್ಪು ಬಾವುಟ ಪ್ರದರ್ಶಿಸುವ ಮತ್ತು 20ರಿಂದ ನಡೆಸುವ ಮುಷ್ಕರಕ್ಕೆ ಬೆಂಬಲಿಸಿ, ಪಾಲ್ಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-4-442954973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.