ಬೆಂಗಳೂರು: ಪಶುವೈದ್ಯರಾದ ಸಮೀಕ್ಷಾ ರೆಡ್ಡಿ ಮತ್ತು ವೈಶಾಖ್ ವಿಸ್ವಾನ್ ಅವರ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹಾಗೂ ಜಾಮ್ ನಗರದ ವಂತಾರಾದಲ್ಲಿ ಡಾ.ವೈಶಾಖ್ ವಿಸ್ವಾನ್ ಅವರ ಸಾವು ಪಶುವೈದ್ಯಕೀಯ ಕ್ಷೇತ್ರ ಎದುರಿಸುತ್ತಿರುವ ಅಪಾಯಕಾರಿ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೃಗಾಲಯ ಮತ್ತು ಸಫಾರಿಗಳಲ್ಲಿ ಕಾರ್ಯನಿರ್ವಹಿಸುವ ಪಶುವೈದ್ಯರಿಗೆ ಕಟ್ಟುನಿಟ್ಟಾದ ಸುರಕ್ಷತಾ ಕಾರ್ಯಾಚರಣೆ ವಿಧಾನಗಳನ್ನು (ಎಸ್ಒಪಿ) ಜಾರಿಗೊಳಿಸಬೇಕು, ಅಪಾಯಕಾರಿ ಪರಿಸ್ಥಿತಿಯಲ್ಲಿ ಕೆಲಸ ಮಾಡುವವರಿಗೆ ವಿಶೇಷ ಭತ್ಯೆ ಮತ್ತು ವಿಮಾ ಸೌಲಭ್ಯ ಒದಗಿಸಬೇಕು. ವನ್ಯಜೀವಿ ವಿಭಾಗಗಳಲ್ಲಿ ಗುತ್ತಿಗೆ ಆಧಾರದ ನೇಮಕಾತಿ ಬದಲು ಕಾಯಂ ಪಶುವೈದ್ಯಕೀಯ ವಿಭಾಗಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪಶುಗಳ ಆರೋಗ್ಯ ಕಾಪಾಡುವಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಪಶುವೈದ್ಯರ ಸುರಕ್ಷತೆಯ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀರಣ್ಣ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪಶು ವೈದ್ಯಕೀಯ ಕಾಲೇಜಿನ ಡೀನ್ಗಳು ಕಪ್ಪು ಪಟ್ಟಿ ಧರಿಸಿದ್ದರು. ಹೆಬ್ಬಾಳದ ಎನ್.ಕೆ.ಶಿವಕುಮಾರ್ ಗೌಡ, ಬೀದರ್ನ ಡಾ.ಎಂ.ಕೆ.ತಾಂಡ್ಲೆ, ಗದಗದ ಡಾ. ರಾಮಚಂದ್ರ ಬಿ., ಶಿವಮೊಗ್ಗದ ಡಾ. ಪ್ರಕಾಶ್ ನಾಡೂರ್, ಹಾಸನದ ಡಾ. ಓ.ಆರ್. ನಟರಾಜು, ಅಥಣಿಯ ಡಾ. ಗಂಗಾನಾಯಕ್ ಹಾಗೂ ಸಂಶೋಧನಾ ನಿರ್ದೇಶಕ ಡಾ. ಬಿ.ವಿ. ಶಿವಪ್ರಕಾಶ್, ವಿಸ್ತರಣಾ ನಿರ್ದೇಶಕ ಡಾ.ಬಸವರಾಜ್ ಅವತಿ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಶ್ರೀಕಾಂತ್ ಕುಲಕರ್ಣಿ, ಪಶು ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಆರ್.ನಾಗರಾಜ ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-1692131367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.