ಬೆಂಗಳೂರು: ಬೆಂಗಳೂರನ್ನು ವಿಶ್ವದರ್ಜೆಯ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ಅಗತ್ಯವಿರುವ ‘ಆರ್ಥಿಕ ಮಾಸ್ಟರ್ ಪ್ಲಾನ್’ ರೂಪಿಸಲು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ (ಐಎಸ್ಇಜಿ) ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಐಎಸ್ಇಜಿಯ ನಿರ್ದೇಶಕ ಶಿರೀಶ್ ಸಂಖೆ ಅವರು ಮಂಗಳವಾರ ಪರಸ್ಪರ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಒಡಂಬಡಿಕೆಯ ಉದ್ದೇಶದ ಬಗ್ಗೆ ವಿವರಿಸಿದರು.

‘ಬೆಂಗಳೂರನ್ನು ವಿಶ್ವದರ್ಜೆಯ ಪ್ರಗತಿಯ ಹಬ್ ಮಾಡಲು 3 ವರ್ಷಗಳಿಂದ ಪ್ರಯತ್ನ ಮಾಡುತ್ತಲೇ ಇದ್ದೇವೆ.ನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆರ್ಥಿಕ ಶಕ್ತಿನೀಡಿದ್ದೇವೆ. ಬೆಂಗಳೂರು ಮೆಟ್ರೋಪಾಲಿಟಿನ್ ಪ್ರದೇಶದಲ್ಲಿ ತಲಾ ಆದಾಯ 8,850 ಡಾಲರ್ನಷ್ಟಿದ್ದು ರಾಜ್ಯದ ಸರಾಸರಿಗಿಂತ ದುಪ್ಪಟ್ಟಿದೆ. 8 ಸಾವಿರ ಚದರ ಕಿ.ಮೀಗಿಂತ ಹೆಚ್ಚು ಪ್ರದೇಶದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ದಕ್ಷಿಣ ಜಿಲ್ಲೆಗಳು ಹರಡಿದ್ದು, 1.6 ಕೋಟಿ ಜನ ಇಲ್ಲಿದ್ದಾರೆ’ ಎಂದರು.

‘ಭಾರತದ ಸಾಫ್ಟ್ವೇರ್ ರಫ್ತಿನಲ್ಲಿ ಶೇ 42ರಷ್ಟು ಕೊಡುಗೆ ಬೆಂಗಳೂರು ನೀಡುತ್ತಿದೆ. ನಗರಕ್ಕೆ 500 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ 2032ರಿಂದ 2037ರ ಅವಧಿಯಲ್ಲಿ ಕೈಗೊಳ್ಳಬೇಕಾದ ‘ಆರ್ಥಿಕ ಮಾಸ್ಟರ್ ಪ್ಲಾನ್’ ಅನ್ನು ರೂಪಿಸಲಾಗುತ್ತಿದೆ. ಬೆಂಗಳೂರಿಗೆ ಹೊಸ ರೂಪ, ಶಕ್ತಿ ನೀಡಲು ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದರು.

‘ಎಲ್ಲಿ ಉದ್ಯೋಗ ಸೃಷ್ಟಿಸಬೇಕು, ಎಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು, ಎಲ್ಲಿ ವಸತಿ ಯೋಜನೆಗಳನ್ನು ತರಬೇಕು ಎಂದು ಯೋಚಿಸಿ ಸಂಚಾರ ದಟ್ಟಣೆ ನಿವಾರಣೆಗೆ ಸಂಬಂಧಿಸಿದಂತೆ ನಕ್ಷೆ ರೂಪಿಸಲಾಗುವುದು. ದೇಶದ ಇತರೆ ನಗರಗಳಾದ ಮುಂಬೈ, ದೆಹಲಿ, ಕೋಲ್ಕತ್ತದಲ್ಲಿ ಇಲ್ಲಿಗಿಂತ ಹೆಚ್ಚು ಸಂಚಾರ ದಟ್ಟಣೆ ನೋಡಿದ್ದೇನೆ. ಸಂಚಾರ ದಟ್ಟಣೆ ನಿವಾರಣೆಗೆ ಯೋಜನೆ ರೂಪಿಸಿದ್ದೇವೆ. ಸುಮಾರು ₹2 ಲಕ್ಷ ಕೋಟಿ ವೆಚ್ಚದ ಯೋಜನೆ ರೂಪಿಸಿದ್ದು, ಹಂತ ಹಂತವಾಗಿ ಇದನ್ನು ಕಾರ್ಯಗತಗೊಳಿಸಲಾಗುತ್ತಿದೆ’ ಎಂದು ವಿವರಿಸಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-94695806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.