ಬೆಂಗಳೂರು: ಪದಾಧಿಕಾರಿಗಳನ್ನು ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿದ ವಿಚಾರಕ್ಕೆ ಯುವ ಕಾಂಗ್ರೆಸ್ನ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇದೇ 21ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯ ತಯಾರಿ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಈ ಇಬ್ಬರು ಬೆಂಬಲಿಗರ ನಡುವೆ ತೀವ್ರ ವಾಗ್ವಾದ, ತಳ್ಳಾಟ-ನೂಕಾಟ ನಡೆದು ಕೈಕೈ ಮಿಲಾಯಿಸುವ ಹಂತ ತಲುಪಿತು.

ಯುವ ಕಾಂಗ್ರೆಸ್ ಪದಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದ್ದ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೋಟಿಸ್ ನೀಡದೆ ಕೆಲವು ಪದಾಧಿಕಾರಿಗಳನ್ನು ಹುದ್ದೆಯಿಂದ ಬಿಡುಗಡೆ ಮಾಡಿದ್ದು ಏಕೆ ಎಂದು ದೀಪಿಕಾ ರೆಡ್ಡಿ ಬೆಂಬಲಿಗರು ಪ್ರಶ್ನಿಸಿದರು. ಅಲ್ಲದೆ, ಮಂಜುನಾಥ ಗೌಡ ಮತ್ತು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಂ ಭಂಡಾರಿ ಅವರಿಗೆ ಕಾರ್ಯಕರ್ತರು ಘೇರಾವ್ ಹಾಕಿದರು.

ಏನಿದು ವಿವಾದ?: ರಾಜ್ಯ ಯುವ ಕಾಂಗ್ರೆಸ್ನ 15 ಪದಾಧಿಕಾರಿಗಳನ್ನು ಇತ್ತೀಚೆಗೆ ಜವಾಬ್ದಾರಿಯಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಲಾಗಿತ್ತು. ಇದಕ್ಕೆ ಪಕ್ಷ ಚಟುವಟಿಕೆಯಲ್ಲಿ ನಿಷ್ಕ್ರಿಯತೆಯ ಕಾರಣ ನೀಡಲಾಗಿತ್ತು. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಇದರಲ್ಲಿ ಒಳಗೊಂಡಿದ್ದಾರೆ. ಸಂಘಟನಾ ಚಟುವಟಿಕೆಯಲ್ಲಿ ಗೈರಾಗಿ, ಕರ್ತವ್ಯ ಲೋಪ ಎಸಗಿದ ಕಾರಣ ರಾಷ್ಟ್ರೀಯ ನಾಯಕತ್ವ ಈ ಶಿಸ್ತು ಕ್ರಮ ಕೈಗೊಂಡಿದೆ.

ಯಾರಿಗೆಲ್ಲಾ ಕೊಕ್ ? :ದೀಪಿಕಾ ರೆಡ್ಡಿ, ಸಿ.ಎಸ್. ಫ್ರಾನ್ಸಿಸ್ ಬೆನಿಟೊ, ಸುಮನ್ ಸೋಮಶೇಖರ್, ಬಿಂದು ಗೌಡ, ಕೆ. ಲಕ್ಷ್ಮಿ, ವಾಣಿ ಕಾಂಬ್ಳೆ, ಅಫ್ನಾನ ಖಾನಂ, ಎಸ್. ದಕ್ಷಿಣಮೂರ್ತಿ (ಎಲ್ಲರೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು) ಮೊಹಮ್ಮದ್ ಆಸಿಫ್ ಹುಸೇನ್, ಎಸ್.ಆರ್.ಎಸ್. ಚಂದ್ ಬಾಷಾ, ಎಸ್. ನವೀನ್ ಕುಮಾರ್, ಜಿ.ಸಿ. ಗೋವರ್ಧನ್, ಸೈಯದ್ ಹುಸೇನ್ ಖಾದ್ರಿ, ಪವನ್ ಸಾಲಿಯಾನ್, ಬಿ.ಎಂ. ಅಬ್ದುಲ್ ರವೂಫ್ (ರಾಜ್ಯ ಕಾರ್ಯದರ್ಶಿಗಳು).

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-1399143321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.