ಬೆಂಗಳೂರು: ‘ಅಣುಶಕ್ತಿಗಿಂತಲೂ ಯುವಶಕ್ತಿ ಮಿಗಿಲಾಗಿದ್ದು, ಅವರು ಮನಸ್ಸು ಮಾಡಿದರೆ ನವ ಸಮಾಜದ ನಿರ್ಮಾಣ ಮಾಡಬಹುದು. ಹೀಗಾಗಿ ಅವರನ್ನು ದುಶ್ಚಟ, ದುರ್ಗುಣಗಳಿಂದ ಮುಕ್ತಗೊಳಿಸಬೇಕು’ ಎಂದು ವೀರಶೈವ– ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಿಳಾ ಘಟಕ ಮತ್ತು ಯುವ ಘಟಕದ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವ ಮತ್ತು ಮಹಿಳಾ ಘಟಕಗಳ ಪದಾಧಿಕಾರಿಗಳು ತಂತ್ರಜ್ಞಾನ ಬಳಸಿಕೊಂಡು ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮುದಾಯದ ಯುವಜನರನ್ನು ಸಂಪರ್ಕಿಸಿ, ಅವರನ್ನು ಸದಸ್ಯರನ್ನಾಗಿ ಮಾಡುವುದರ ಜೊತೆಗೆ, ಅವರ ಕೌಶಲವರ್ಧನೆಗೆ ನೆರವಾಗಬೇಕು ಎಂದು ಹೇಳಿದರು.

ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ‘ಭೀಮಣ್ಣ ಖಂಡ್ರೆ ಅವರು ಅಧ್ಯಕ್ಷರಾಗಿದ್ದಾಗ ವಿಧಾನಸಭೆ ಚುನಾವಣೆ ಹತ್ತಿರದಲ್ಲಿತ್ತು. ಆಗ ಅವರು ಬೀದರ್, ಕಲಬುರ್ಗಿ, ಧಾರವಾಡ, ಗದಗ, ಬೆಳಗಾವಿ, ತುಮಕೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸಿ ಪಕ್ಷಾತೀತವಾಗಿ ಸಮಾಜವನ್ನು ಒಗ್ಗೂಡಿಸಿದರು. ಆಗ ನಡೆದ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಶಾಸಕರು ದೊಡ್ಡ ಸಂಖ್ಯೆಯಲ್ಲಿ ಗೆದ್ದು ಬಂದಿದ್ದರು’ ಎಂದು ಹೇಳಿದರು.

‘ವೀರಶೈವ– ಲಿಂಗಾಯತರನ್ನು ಒಡೆಯುವ ಪ್ರಯತ್ನ ನಡೆದಾಗ ಶಾಮೂರು ಶಿವಶಂಕರಪ್ಪ ಅವರು ಸಮಾಜದ ಪರ ನಿಂತರು, ಮಹಾಸಭಾದ ಅಧ್ಯಕ್ಷರಾಗಿ ತಮ್ಮ ಜವಾಬ್ದಾರಿ ನಿಭಾಯಿಸಿದರು’ ಎಂದರು.

ಶಿವಗಂಗಾ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀರಂಗಪಟ್ಟಣ ಬೇಬಿಮಠದ ಚಂದ್ರವನದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶರಣ ಪ್ರಕಾಶ್ ಪಾಟೀಲ, ಶರಣಬಸಪ್ಪ ದರ್ಶನಾಪುರ, ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವೆ ರಾಣಿ ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-1813082063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.