ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿವಾರು ಸಮೀಕ್ಷೆ‌ಯ ದತ್ತಾಂಶ ಆಧರಿಸಿ ಸೌಲಭ್ಯ: ಸಿದ್ದರಾಮಯ್ಯ

Published 7 ಜೂನ್ 2023, 20:05 IST
Last Updated 7 ಜೂನ್ 2023, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದಿನ ಬಾರಿ ನನ್ನ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಿದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

‘ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಆದ್ಯತೆಯ ಅಂಶಗಳ ಕುರಿತು ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆ ನಡೆಸಲಾಗಿತ್ತು’ ಎಂದರು.

‘ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು’ ಎಂದೂ ಅಭಿಪ್ರಾಯಪಟ್ಟರು.

ಒಕ್ಕೂಟದ ಮುಖಂಡರಾದ ಕೆ.ಎಂ. ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ. ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ. ನರಸಿಂಹಯ್ಯ, ಪ್ರೊ. ಜಾಫೆಟ್, ಬಿ.ಟಿ. ಲಲಿತಾನಾಯಕ್, ಜಿ.ಎಸ್.ಪಾಟೀಲ ಸೇರಿ 150ಕ್ಕೂ ಹೆಚ್ಚು ಮಂದಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT