ನವದೆಹಲಿ: ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಪ್ರಕರಣದ ಮರು ವಿಚಾರಣೆ ನಡೆಸಬೇಕು ಎಂದು ಕೋರಿ ಸಮಾಜ ಪರಿವರ್ತನ ಟ್ರಸ್ಟ್ ಸಲ್ಲಿಸಿದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ವಿಜಯ್ ಬಿಷ್ಣೋಯ್ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿದೆ.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ದೇವದತ್ ಕಾಮತ್ ಅವರು ಸಮಾಜ ಪರಿವರ್ತನ ಟ್ರಸ್ಟ್ನ ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಅರ್ಜಿದಾರರು ಪ್ರಾಥಮಿಕ ಮಾಹಿತಿದಾರರು ಅಲ್ಲ. ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಅರ್ಜಿಯನ್ನು ಮಾನ್ಯ ಮಾಡಬಾರದು’ ಎಂದು ಕೋರಿದರು.

ಈ ಪ್ರಾಥಮಿಕ ಆಕ್ಷೇಪಣೆಯನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಪೀಠ ಭರವಸೆ ನೀಡಿತು.

ಬೆನ್ನಿಗಾನಹಳ್ಳಿಯ 4 ಎಕರೆ 20 ಗುಂಟೆ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿತ್ತು. ಈ ಜಾಗವನ್ನು ಶ್ರೀನಿವಾಸ್ ಎಂಬವರಿಂದ ಶಿವಕುಮಾರ್ ಖರೀದಿಸಿದ್ದರು. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.

ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ 2015ರಲ್ಲಿ ದೋಷಮುಕ್ತಗೊಳಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು.

ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕು ಎಂದು ಸಮಾಜ ಪರಿವರ್ತನ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-4-567628389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.