ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸಹಾಯಕ ಎಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಲೋಕಾಯುಕ್ತ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

‘ನನ್ನ ವಿರುದ್ಧ ಬೆಂಗಳೂರು ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಕೋರಿ ಎನ್.ಎಚ್.ಯತೀಶ್ ಪಾಳೇಗಾರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.

‘ಪ್ರಕರಣವನ್ನು ಗಮನಿಸಿದಾಗ ಅರ್ಜಿದಾರ ಯತೀಶ್ (ಕ್ಷೇತ್ರ ಪಾಲನೆ ಮತ್ತು ನಿರ್ವಹಣೆ ವಿಭಾಗ) ಪ್ರಾಥಮಿಕವಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಗೊತ್ತಾಗುತ್ತದೆ ಮತ್ತು ಹಣವನ್ನು ದೂರುದಾರರಿಂದ ಪಡೆಯುತ್ತಿರುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಹಾಗಾಗಿ, ಲಂಚಕ್ಕೆ ಬೇಡಿಕೆ ಇರಿಸಿರುವ ಮತ್ತು ಪಡೆಯುವ ಬಗ್ಗೆಗಿನ ಅಂಶಗಳು ಮೇಲ್ನೋಟಕ್ಕೆ ಮನದಟ್ಟಾಗುವಂತಿವೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ತನಿಖೆ ಮುಂದುವರಿಸಲು ಹಸಿರು ನಿಶಾನೆ ತೋರಿದೆ.

ಗಾಳಿ ಆಂಜನೇಯ ದೇಗುಲ: ಇಂದು ಅರ್ಜಿ ವಿಚಾರಣೆ

ನಗರದ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಜುಲೈ 15) ವಿಚಾರಣೆ ನಡೆಸಲಿದೆ.

ಈ ಸಂಬಂಧ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ‘ಸರ್ಕಾರ ತರಾತುರಿಯಲ್ಲಿ ದೇಗುಲವನ್ನು ಮುಜರಾಯಿ ಇಲಾಖೆಗೆ ಒಪ್ಪಿಸುವ ನಿರ್ಧಾರ ಕೈಗೊಂಡಿದೆ. ಎರಡನೇ ಶನಿವಾರ ರಜಾ ದಿನದಂದು ತನ್ನ ಸುಪರ್ದಿಗೆ ಪಡೆದಿದೆ. ಇದು ಕಾನೂನು ಬಾಹಿರ. ಹಾಗಾಗಿ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಬೇಕು’ ಎಂದು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸೋಮವಾರ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠ ‘ಮಂಗಳವಾರ (ಜುಲೈ 15) ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿತು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸಿ.ವಂಶಿಕೃಷ್ಣ ವಕಾಲತ್ತು ವಹಿಸಿದ್ದಾರೆ. ಪ್ರಕರಣವೇನು?: ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ವೇಳೆ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೇವಾಲಯದ ಸಿಬ್ಬಂದಿಯಿಂದಲೇ ಕಳ್ಳತನವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ‘ವಿಚಾರಣೆ ನಡೆಸಿ ವರದಿ ಸಲ್ಲಿಸಿ’ ಎಂದು ಮುಜರಾಯಿ ಇಲಾಖೆ ಆಯುಕ್ತರು 2024ರ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ವಿಚಾರಣಾ ವರದಿ ಅನುಸಾರ ‘ದೇವಾಲಯದ ಅಸಮರ್ಪಕ ನಿರ್ವಹಣೆ ಮತ್ತು ಹಣ ದುರುಪಯೋಗ ಸಂಬಂಧ ಹಾಗೂ ಟ್ರಸ್ಟ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲ’ ಎಂಬ ಆರೋಪದಡಿ ಧಾರ್ಮಿಕ ದತ್ತಿ ಇಲಾಖೆ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಇದನ್ನು ಪ್ರಶ್ನಿಸಿ ದೇವಾಲಯದ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.