ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬೆಸ್ಕಾಂ ಜಾಗೃತದಳದ ಎಸ್.ಪಿ ಬಿ.ಎನ್. ಲಾವಣ್ಯ (39) ಅವರು ಶನಿವಾರ ನಿಧನರಾಗಿದ್ದಾರೆ.

ಕ್ಯಾನ್ಸರ್ನಿಂದ ಬಳಲುತ್ತಿದ್ದ ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ.

2012ರಲ್ಲಿ ಇಲಾಖೆ ಸೇರಿದ ಅವರು ಬಳ್ಳಾರಿ ಮೂಲದವರು. ಬಳ್ಳಾರಿ, ತುಮಕೂರು, ಮಂಡ್ಯ ಹಾಗೂ ಡಿಸಿಆರ್ಇನಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2017ರಲ್ಲಿ ಎಸ್ಪಿ ದರ್ಜೆಗೆ ಪದೋನ್ನತಿ ಹೊಂದಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು ಗ್ರಾಮದ ಲಾವಣ್ಯ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಲಾವಣ್ಯ ಅವರ ಅಕಾಲಿಕ ನಿಧನಕ್ಕೆ ಸ್ನೇಹಿತರು, ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.