ನವದೆಹಲಿ: ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ತ್ವರಿತ ನೀರಾವರಿ ಪ್ರಯೋಜನ ಕಾರ್ಯಕ್ರಮ'ದ ಅಡಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

2023ರ ಬಜೆಟ್ನಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಅನುದಾನ ಘೋಷಿಸಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಮೊತ್ತ ಭರಿಸಲಿದೆ. ಆದರೆ, ಬಜೆಟ್ನಲ್ಲಿ ಘೋಷಿಸಿರುವ ಅನುದಾನ ಬಿಡುಗಡೆ ಆಗಿಲ್ಲ. ಇದರಿಂದ ಯೋಜನೆಯ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ. ಕೃಷಿ ಸಿಂಚಾಯಿ ಯೋಜನೆಯಡಿ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು. ‘ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಕಾರಜೋಳ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.